20.4 C
Bengaluru
Monday, January 20, 2020

ಡಿಕೆಶಿ ಬಂಧನ ಹಿನ್ನೆಲೆ ರಾಮನಗರ ಬಂದ್​: ಶಾಲಾ-ಕಾಲೇಜುಗಳಿಗೆ ರಜೆ, ಬಣಗುಡುತ್ತಿರುವ ಬಸ್​ ನಿಲ್ದಾಣ, ಪ್ರಯಾಣಿಕರ ಪರದಾಟ

Latest News

ಸಿಎಎ ಬೆಂಬಲಿಸಿ ರ‌್ಯಾಲಿ

ಬಾದಾಮಿ: ವಿಶ್ವದ ದೊಡ್ಡ ಹಿಂದು ರಾಷ್ಟ್ರವಾದ ಭಾರತದ ಸಂಸ್ಕೃತಿ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ...

ಕೋಟೆನಗರಿಯಲ್ಲಿ ಆಕರ್ಷಕ ಪಥ ಸಂಚಲನ

ಬಾಗಲಕೋಟೆ: ಸಂಕ್ರಾಂತಿ ಹಬ್ಬದ ಅಂಗವಾಗಿ ಆರ್‌ಎಸ್‌ಎಸ್ ಅಂಗ ಸಂಸ್ಥೆ ರಾಷ್ಟ್ರ ಸೇವಿಕಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಕಿಯರ ಘೋಷ ಸಹಿತ...

ಧರ್ಮದಲ್ಲಿ ರಾಜಕೀಯ ಸಲ್ಲ

ತೇರದಾಳ: ಧರ್ಮ ಶ್ರೇಷ್ಠವಾಗಿದ್ದು, ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ವೀರಶೈವರು ಲಿಂಗವನ್ನು ತ್ರಿಕಾಲಗಳಲ್ಲಿ ಪೂಜೆಗೈಯುತ್ತ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮ ಮತ್ತು ಗುರು ಜೀವನ...

ಕಲಾದಗಿಯಲ್ಲಿ ಆರ್ಥಿಕ ಗಣತಿಗೆ ಅಸಹಕಾರ

ಕಲಾದಗಿ: ಗ್ರಾಮದಲ್ಲಿ ರಾಷ್ಟ್ರೀಯ 7ನೇ ಆರ್ಥಿಕ ಗಣತಿ ಕಾರ್ಯ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಪ್ರಬಲ ಕೋಮಿನ ನೂರಾರು ಮನೆಯವರು ಆರ್ಥಿಕ ಗಣತಿದಾರರಿಗೆ ಮಾಹಿತಿ...

ವೇಗ ಕಾಣದ ಫಾಸ್ಟ್ಯಾಗ್​ !

ಹೀರಾನಾಯ್ಕ ಟಿ. ವಿಜಯಪುರ: ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಯಾಗ್ ​ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಆದರೆ, ಸಾಕಷ್ಟು ವಾಹನಗಳಿಗೆ ಫಾಸ್ಟ್ಯಾಗ್  ಅಳವಡಿಸದೆ ಇರುವುದರಿಂದ...

ರಾಮನಗರ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ಡಿಕೆಶಿ ತವರು ಜಿಲ್ಲೆ ರಾಮನಗರದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದ್ದು, ಇಂದು ರಾಮನಗರ ಬಂದ್​ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಮನಗರ ಸಂಪೂರ್ಣ ಸ್ಥಬ್ಧವಾಗಿದೆ.

ಇ.ಡಿ. ಎದುರು ವಿಚಾರಣೆಗೆ ಹಾಜರಾಗಿದ್ದ ಡಿಕೆಶಿ ಅವರನ್ನು ವಿಚಾರಣೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಹೇಳಿ ಮಂಗಳವಾರ ರಾತ್ರಿ ಇ.ಡಿ. ಅಧಿಕಾರಿಗಳು ಬಂಧಿಸಿದ್ದಾರೆ. ಅಲ್ಲದೆ, ಇ.ಡಿ. ವಿಶೇಷ ನ್ಯಾಯಾಲಯದ ಮುಂದೆ ಡಿಕೆಶಿ ಅವರನ್ನು ಹಾಜರುಪಡಿಸಿ, ಸಮರ್ಪಕ ತನಿಖೆಗಾಗಿ 10 ದಿನಗಳ ಕಾಲ ಇ.ಡಿ. ತನ್ನ ಕಸ್ಟಡಿಗೆ ತೆಗೆದುಕೊಂಡಿದೆ. ಡಿಕೆಶಿ ಬಂಧನವಾದಾಗಿನಿಂದ ರಾಮನಗರ ಜಿಲ್ಲೆಯಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದ್ದು, ಇದರ ಪರಿಣಾಮ ಇಂದು ಬಂದ್​ ಆಚರಿಸಲಾಗುತ್ತಿದೆ.

ರಾಮನಗರ ಜಿಲ್ಲೆಯ ಬಸ್ ನಿಲ್ದಾಣ ಬಣಗುಡುತ್ತಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಒಂದೊಂದೇ ಬಸ್ ಸಂಚಾರ ನಡೆಸುತ್ತಿದ್ದು, ಬಸ್​ಗಳಿಲ್ಲದೆ ಸಾರ್ವಜನಿಕರು ಪರದಾಡುತ್ತಿದ್ದಾರೆ. ಐಜೂರು ವೃತ್ತದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮವನ್ನು ವಹಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು 6 ಗಂಟೆಗೆ ಬಂದ್ ಮಾಡಬೇಕಿತ್ತು. ಆದರೆ, ಸಮಯವಾದರೂ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿಲ್ಲ.

ಶಾಲಾ-ಕಾಲೇಜುಗಳಿಗೆ ರಜೆ
ಬಂದ್​ ಬಿಸಿ ವಿದ್ಯಾರ್ಥಿಗಳಿಗೆ ತಟ್ಟಬಹುದೆಂದು ಇಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಎಂ.ಎಸ್​.ಅರ್ಚನಾ ಅವರು ರಜೆ ಘೋಷಣೆ ಮಾಡಿದ್ದಾರೆ. ಅಲ್ಲದೆ, ಸಂಚಾರವೂ ಸಂಪೂರ್ಣ ಸ್ಥಬ್ದವಾಗಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ ಎಂದು ರಜೆ ನೀಡಲಾಗಿದೆ.

ಮಂಗಳವಾರ ಡಿಕೆಶಿ ಬಂಧನವಾಗುತ್ತಿದ್ದಂತೆ ರಾಮನಗರದಲ್ಲಿ ಸ್ವಯಂ ಘೊಷಿತ ಬಂದ್ ನಡೆಸಲಾಯಿತು. ಜಿಲ್ಲೆಯಲ್ಲಿ ಒಟ್ಟಾರೆ 14 ಬಸ್​ಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಕನಕಪುರದ ಚುಂಚಿ ಕಾಲನಿಯಲ್ಲಿ ಒಂದು ಬಸ್ ಸಂಪೂರ್ಣ ಭಸ್ಮ ಮಾಡಲಾಗಿತ್ತು. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ದೊಡ್ಡಾಲಹಳ್ಳಿಯ ಅಭಿಮಾನಿಯೊಬ್ಬ ಕೇಶಮುಂಡನ ಮಾಡಿಸಿಕೊಂಡಿದ್ದು, ಜಿಲ್ಲೆಯ ಬಿಜೆಪಿ ಕಚೇರಿಗಳು ಮತ್ತು ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ನಿವಾಸಕ್ಕೆ ಭದ್ರತೆ ನೀಡಲಾಗಿತ್ತು. ಇಂದು ಜೆಡಿಎಸ್ ಸಹಕಾರದೊಂದಿಗೆ ಕಾಂಗ್ರೆಸ್ ರಾಮನಗರ ಜಿಲ್ಲಾ ಬಂದ್ ಹಮ್ಮಿಕೊಂಡಿದೆ. (ದಿಗ್ವಿಜಯ ನ್ಯೂಸ್​)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...