More

    ಪಕ್ಷದ ಎಲ್ಲ ಬಂಡಾಯ ಅಭ್ಯರ್ಥಿಗಳಿಗೆ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್!

    ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷ ಟಿಕೆಟ್ ಕೊಟ್ಟಿಲ್ಲ ಎಂದು ತೀವ್ರ ಬೇಸರಗೊಂಡ ಕೆಲವರು ಬಂಡಾಯ ವ್ಯಕ್ತಪಡಿಸುವುದು ಸರ್ವೇಸಾಮಾನ್ಯ. ಆದರೆ ತಮ್ಮ ಪಕ್ಷದ ಅಂಥ ಎಲ್ಲ ಬಂಡಾಯ ಅಭ್ಯರ್ಥಿಗಳಿಗೆ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.

    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಪಕ್ಷದಲ್ಲಿನ ಬಂಡಾಯವನ್ನು ಬೆದರಿಸಿಯಾದರೂ ತಣ್ಣಗಾಗಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಅದಕ್ಕಾಗಿ ಅವರು ಪಕ್ಷದಲ್ಲಿನ ಎಲ್ಲ ಬಂಡಾಯ ಅಭ್ಯರ್ಥಿಗಳನ್ನು ಉದ್ದೇಶಿಸಿ ಕಠಿಣ ಕ್ರಮದ ಎಚ್ಚರಿಕೆ ಇರುವ ಸೂಚನೆಯೊಂದನ್ನು ಹೊರಡಿಸಿದ್ದಾರೆ.

    ಇದನ್ನೂ ಓದಿ: ಮಕ್ಕಳು ಮಹಿಳೆಯರ ಮೇಲೂ ಲಾಠಿ ಬೀಸಿದ ಪೊಲೀಸರು; ಪ್ರಶ್ನಿಸಿದ್ದೇ ತಪ್ಪಾಯ್ತಾ?

    “ತಮಗೆಲ್ಲ ತಿಳಿದಿರುವಂತೆ ಪ್ರಸ್ತುತ ನಡೆಯುತ್ತಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾದ ಅಲೆ ರಾಜ್ಯಾದ್ಯಂತ ಇರುತ್ತದೆ. ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರದ ಆಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ ಹಾಗೂ ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪಕ್ಷವನ್ನು ಅಧಿಕಾರಕ್ಕೆ ತರಲು ಹಗಲಿರುಳೆನ್ನದೆ ಶ್ರಮಿಸುತ್ತಿದ್ದಾರೆ”

    ಇದನ್ನೂ ಓದಿ: ಕಾಂಗ್ರೆಸ್​ ಸೋಷಿಯಲ್ ಮೀಡಿಯಾ ಬ್ಯಾನ್ ಮಾಡಲು ಚುನಾವಣಾ ಆಯೋಗಕ್ಕೆ ಮನವಿ: ಡಿ.ಕೆ.ಶಿವಕುಮಾರ್ ವಿರುದ್ಧವೂ ದೂರು

    “ಆದರೆ ತಾವು ಸದರಿ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದಾಗಿ ತಿಳಿದುಬಂದಿದೆ. ದಯವಿಟ್ಟು ತಾವು ಸ್ಪರ್ಧೆಯಿಂದ ನಿವೃತ್ತರಾಗಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಪರವಾಗಿ ಬೆಂಬಲ ಘೋಷಿಸಬೇಕಾಗಿ ಕೋರುತ್ತೇನೆ. ಹಾಗೆಯೇ ಸ್ಥಳೀಯವಾಗಿ ನಮ್ಮ ಕಾರ್ಯಕರ್ತರ ಜತೆ ಸೇರಿಕೊಂಡು ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲ ರೀತಿಯಲ್ಲಿ ಸಹಕರಿಸಬೇಕಾಗಿ ಈ ಮೂಲಕ ಕೋರುತ್ತೇನೆ. ತಾವೆಲ್ಲ ತಕ್ಷಣ ಸ್ಪರ್ಧೆಯಿಂದ ನಿವೃತ್ತರಾಗದಿದ್ದರೆ ಅನಿವಾರ್ಯವಾಗಿ ತಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಿಳಿಸಬಯಸುತ್ತೇನೆ” ಎಂಬುದಾಗಿ ಬಂಡಾಯ ಎದ್ದಿರುವ ಎಲ್ಲರನ್ನೂ ಉದ್ದೇಶಿಸಿ ಡಿ.ಕೆ.ಶಿವಕುಮಾರ್ ಲಿಖಿತ ಸಂದೇಶ ರವಾನಿಸಿದ್ದಾರೆ.

    ಸಂಬಂಧಿಯಿಂದಲೇ ಭೀಕರ ಕೃತ್ಯ: ಅಣ್ಣನ ಹೆಂಡತಿ ಹಾಗೂ ಮಗನನ್ನು ಹೊಡೆದು ಕಡಿದು ಕೊಂದ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts