ಕನಕಪುರದಲ್ಲಿ ಡಿ.ಕೆ. ಶಿವಕುಮಾರ್​ ಪರ ಪತ್ನಿ ಉಷಾ ಮತಬೇಟೆ!

DKS Wife Usha
Published on

ರಾಮನಗರ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಚಾರದ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಅಭ್ಯರ್ಥಿಗಳ ಪರ ಪತ್ನಿ ಮತ್ತು ಮಕ್ಕಳು ಸಹ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ. ಮೊನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಅವರ ಪತ್ನಿ ಚನ್ನಮ್ಮ ಶಿಗ್ಗಾಂವಿಯಲ್ಲಿ ಮತ ಬೇಟೆಯಾಡಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪರ ಅವರ ಪತ್ನಿ ಉಷಾ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ.​

ಉಷಾ ಅವರು ಕನಕಪುರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಹಲಸಿಮರದೊಡ್ಡಿ, ವಾಣಿ ಟಾಕೀಸ್, ಜೆಸಿ ಬಡವಾಣೆಯ ಪ್ರಮುಖ ಬೀದಿಗಳಲ್ಲಿ ಮನೆ ಮನೆಗೆ ತೆರಳಿ ಗಂಡನ ಪರವಾಗಿ ಮತಯಾಚನೆ ಮಾಡುತ್ತಿದ್ದಾರೆ. ಉಷಾ ಅವರಿಗೆ ಮಾಜಿ ವಿಧಾನ ಪರಿಷತ್ ಸದಸ್ಯೆ ನಿರ್ಮಲಾ ವೆಂಕಟೇಶ್ ಸಾಥ್ ನೀಡಿದ್ದಾರೆ.

ಬಿಜೆಪಿಯಿಂದ ಆರ್.ಅಶೋಕ್ ಕಣಕ್ಕಿಳಿದಿರುವ ಹಿನ್ನೆಲೆಯಲ್ಲಿ ಕನಕಪುರ ಚುನಾವಣಾ ಕಣ ರಂಗೇರಿದೆ. ಅತ್ತ ಡಿಕೆಶಿ ಸಹೋದರ ಡಿ.ಕೆ ಸುರೇಶ್ ಕಾರ್ಯಕರ್ತರ ಸಭೆಗಳಲ್ಲಿ ನಿರತರಾಗಿಯಾಗಿದ್ದಾರೆ.

ಇನ್ನೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ರಾಜ್ಯ ಪ್ರವಾಸದಲ್ಲಿದ್ದಾರೆ. ಹೀಗಾಗಿ ಪತಿಯ ಗೆಲುವಿಗಾಗಿ ಪತ್ನಿ ಉಷಾ ಅವರು ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net