

ಶೃಂಗೇರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಈ ಬಾರಿ ತಮ್ಮ ಜನ್ಮದಿನವನ್ನು ಚಿಕ್ಕಮಗಳೂರು ಜಿಲ್ಲೆಯ ಕಿಗ್ಗಾ ದೇವಸ್ಥಾನದಲ್ಲಿ ಆಚರಿಸಿಕೊಳ್ಳಲಿದ್ದಾರೆ.
ಡಿ.ಕೆ. ಶಿವಕುಮಾರ್ 15ರಂದು ಶೃಂಗೇರಿಗೆ ಆಗಮಿಸಲಿದ್ದು, ರಾಜ್ಯದಲ್ಲಿ ಕರೊನಾ ನಿಯಂತ್ರಣಕ್ಕೆ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸಲಿದ್ದಾರೆ.
‘ಮಳೆ ದೇವರು’ ಎಂಬ ಖ್ಯಾತಿಗೆ ಪಾತ್ರರಾಗಿರುವ ಶ್ರೀ ಋಷ್ಯಶೃಂಗೇಶ್ವರ ದೇವಸ್ಥಾನದಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ 101 ತೆಂಗಿನಕಾಯಿಗಳನ್ನು ಅವರ ಸಮ್ಮುಖದಲ್ಲಿ ಅಭಿಮಾನಿಗಳು ಒಡೆಯಲಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯದ ಸುಭಿಕ್ಷೆಗಾಗಿಯೂ ಡಿ.ಕೆ. ಶಿವಕುಮಾರ್ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ.
ಕೆಪಿಸಿಸಿಯ ಕಿಸಾನ್ ಸೆಲ್‌ನ ಸದಸ್ಯರೂ ಇದರಲ್ಲಿ ಭಾಗವಹಿಸಿ ಕಾಂಗ್ರೆಸ್ ರಾಜ್ಯ ಅಧ್ಯಕ್ಷರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಿದ್ದಾರೆ ಎಂದು ಸೆಲ್‌ನ ಅಧ್ಯಕ್ಷ ಸಚಿನ್ ಮೀಗಾ ತಿಳಿಸಿದ್ದಾರೆ.