More

    ಮಕ್ಕಳು ಶಾಲೆಯಿಂದ ಹೊರಗುಳಿದರೆ ಮುಖ್ಯ ಶಿಕ್ಷಕರೇ ಹೊಣೆ

    ಎನ್.ಆರ್.ಪುರ: ಶಾಲೆಯಿಂದ ಮಕ್ಕಳು ಹೊರಗುಳಿದರೆ ಶಾಲೆಯ ಮುಖ್ಯ ಶಿಕ್ಷಕರು, ಬಿಇಒಗಳನ್ನು ಹೊಣೆ ಮಾಡಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಿ.ಶಂಕರಪ್ಪ ತಿಳಿಸಿದರು.

    ತಾಪಂ ಸಭಾಂಗಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಸಿಡಿಪಿಒ ಇಲಾಖೆ, ತಾಲೂಕು ಆಡಳಿತ, ತಾಪಂನಿಂದ ಸೋಮವಾರ ಶಿಕ್ಷಕರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಮಕ್ಕಳ ಹಕ್ಕುಗಳ ಪೋಷಣೆ, ರಕ್ಷಣೆ ಕುರಿತು ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಮಕ್ಕಳ ಹಕ್ಕುಗಳ ರಕ್ಷಣೆಗಾಗಿ 30 ಕಾಯ್ದೆಗಳಿವೆ. ಮಕ್ಕಳಿಗೂ ಜೀವಿಸುವ, ಮಾತನಾಡುವ, ದೌರ್ಜನ್ಯದ ವಿರುದ್ಧ ಹೋರಾಡುವ ಸ್ವಾತಂತ್ರ್ಯದೆ. ಮಕ್ಕಳಿಗೆ ತೊಂದರೆಯಾದರೆ, ಅವರ ಹಕ್ಕುಗಳು ಉಲ್ಲಂಘನೆಯಾದಲ್ಲಿ ಆಯೋಗ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದರು.

    ಮಕ್ಕಳು ಸಹ ಸರ್ಕಾರದ ಸೊತ್ತು. ಮಕ್ಕಳ ಬಗ್ಗೆ ಕೆಟ್ಟದಾಗಿ ಮಾತನಾಡುವಾಗ ಎಚ್ಚರದಿಂದ ಇರಬೇಕು. ಇಲ್ಲದಿದ್ದರೆ ಅದು ಅಪರಾಧವಾಗುತ್ತದೆ. 18 ವರ್ಷದ ಒಳಗಿನ ಹೆಣ್ಣು ಮಕ್ಕಳು, 21 ವರ್ಷದ ಒಳಗಿನ ಗಂಡು ಮಕ್ಕಳಿಗೆ ವಿವಾಹ ಮಾಡುವುದು ಅಪರಾಧ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆಲು ಪೋಕ್ಸೋ ಕಾಯ್ದೆ ಬಂದಿದೆ. ಮಕ್ಕಳ ಕಾನೂನುಗಳ ಉಸ್ತುವಾರಿ ಜವಾಬ್ದಾರಿಯನ್ನು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನಿರ್ವಹಿಸಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts