

ಮುಂಬೈ: ಕೇಂದ್ರಾಡಳಿತ ಪ್ರದೇಶವಾದ ದಾದರ್ ಮತ್ತು ನಗರ ಹವೇಲಿ ಸಂಸದ ಮೋಹನ್ ದೇಲ್ಕರ್ (58) ಅವರ ಮೃತದೇಹ ಮುಂಬೈನ ಮರಿನ್ ಡ್ರೈವ್ ಹೋಟೆಲ್ ಒಂದರ ಕೋಣೆಯಲ್ಲಿ ಇಂದು ಪತ್ತೆಯಾಗಿದೆ.
ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳದಲ್ಲಿ ಡೆತ್ನೋಟ್ ಪತ್ತೆಯಾಗಿದೆ ಎಂದು ಮಾಧ್ಯಮಗಳ ವರದಿ ತಿಳಿಸಿವೆ. ಅಲ್ಲದೇ ಅವರ ಸಾವಿನ ಸುತ್ತಮುತ್ತ ಅನುಮಾನಗಳೂ ಮೂಡಿವೆ.
ದಾದರ್ ನಗರ ಹವೇಲಿಯಿಂದ ಏಳು ಬಾರಿ ಸಂಸದರಾಗಿದ್ದದ ಮೋಹನ್ ಮೊದಲು ಕಾಂಗ್ರೆಸ್ನಲ್ಲಿದ್ದರು. 2019 ರಲ್ಲಿ ಕಾಂಗ್ರೆಸ್ ತೊರೆದು ಜೆಡಿಯು ಬೆಂಬಲದಿಂದ ಪಕ್ಷೇತರರಾಗಿ ಗೆದ್ದಿದ್ದರು.