ಲಸಿಕೆಯಿಂದ ಮಾತ್ರ ದಢರಾ ನಿರ್ಮೂಲನೆ -ಮನಪಾ ಆಯುಕ್ತ ಸಿ.ಎಲ್.ಆನಂದ್ ಮಾಹಿತಿ

images (1)
Published on



ಮಂಗಳೂರು : ಲಸಿಕೆಯಿಂದ ಮಾತ್ರ ದಢರಾ ಮತ್ತು ರುಬೆಲ್ಲಾ ರೋಗದ ನಿಯಂತ್ರಣ ಸಾಧ್ಯ ಎಂದು ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತ ಸಿ.ಎಲ್.ಆನಂದ್ ಹೇಳಿದರು.
ಮನಪಾ ಸಭಾಂಗಣದಲ್ಲಿ ನಡೆದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಪೂರ್ವ ತಯಾರಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ‘ ಮಕ್ಕಳಿಗೆ ನೀಡುವ ಲಸಿಕೆ ನೀಡುವ ಅಭಿಯಾನ ಸಂಬಂಧಿಸಿದಂತೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಶೇ. 69 ರಷ್ಟು ಕುಂಠಿತ ಪ್ರಗತಿ ಸೂಚಿಸುತ್ತಿದೆ. ಎಂಆರ್ 1 ಮತ್ತು ಎಂಆರ್ 2 ಲಸಿಕೆಯಿಂದ ವಂಚಿತರಾಗಿರುವ ಎಲ್ಲ ಮಕ್ಕಳಿಗೂ ಸಮರ್ಪಕವಾಗಿ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲು ಕ್ರಮ ವಹಿಸಬೇಕು. ತಾಯಂದಿರ ಸಭೆ ಹಾಗೂ ಬಾಲ ವಿಕಾಸ ಸಮಿತಿ ಸಭೆಯಲ್ಲಿ,ಲಸಿಕೆಯ ಬಗ್ಗೆ ಮಾಹಿತಿ ನೀಡಬೇಕು. ಸಿಡಿಪಿಒಗಳು ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸದಸ್ಯರಾಗಿ ಮೇಲ್ವಿಚಾರಣೆ ನಡೆಸಬೇಕು ಎಂದು ಅವರುಹೇಳಿದರು.
ಮಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಆಯುಷ್ಮತಿ ಆರೋಗ್ಯ ಕೇಂದ್ರಗಳಿಗೆ ಖಾಸಗಿ ಕ್ಲಿನಿಕ್‌ಗಳ ನುರಿತ ವೈದ್ಯರನ್ನು ವಾರದಲ್ಲಿ ಒಂದು ದಿನದ ಮಟ್ಟಿಗೆ ಉಚಿತ ಸೇವೆ ನೀಡಲು ಮನವಿ ಮಾಡಿಕೊಳ್ಳುವಂತೆ ಆಯುಕ್ತರು ತಿಳಿಸಿದರು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ರಾಜೇಶ್ ಬಿ.ವಿ, ವಿಶ್ವ ಆರೋಗ್ಯ ಸಂಸ್ಥೆಯ ಸರ್ವಲೆನ್ಸ್ ಮೆಡಿಕಲ್ ಆಫೀಸರ್ ಡಾ. ಹರ್ಷಿತ್, ತಾಲೂಕು ಆರೋಗ್ಯ ಅಧಿಕಾರಿ ಡಾ. ಸುಜಯ್, ಮಂಗಳೂರು ಮಹಾನಗರ ಆರೋಗ್ಯ ಅಧಿಕಾರಿ ಡಾ. ಮಂಜಯ್ಯ ಶೆಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಉಪಸ್ಥಿತರಿದ್ದರು.
.........................

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net