More

    ಬೆಂಗಳೂರಿನಲ್ಲಿ ನಿತ್ಯ 1500 ಕೋವಿಡ್ ಪರೀಕ್ಷೆ

    ಬೆಂಗಳೂರು:  ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಿಸಲು ನಿತ್ಯ 1500 ಕೋವಿಡ್ ಪರೀಕ್ಷೆ ನಡೆಸಲು, ಸೋಂಕಿತರ ಚಿಕಿತ್ಸೆಗೆ ಸಮಸ್ಯೆಯಾಗದ ರೀತಿಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್, ಐಸಿಯು ಬೆಡ್‌ಗಳ ಕೊರತೆಯಾಗದಂತೆ ಕ್ರಮವಹಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

    ದೇಶದಲ್ಲಿ ಕೋವಿಡ್ ರೂಪಾಂತರಿ ತಳಿ ಪತ್ತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈ ಸಂಬಂಧ ಬುಧವಾರ ಕೇಂದ್ರ ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿದ ಬಳಿಕ ಸಂಜೆ ಆರೋಗ್ಯ ಸೌಧದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳ ಜೊತೆ ಸಚಿವರು ಸಭೆ ನಡೆಸಿದರು.

    ಈ ವೇಳೆ ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ವಿಶೇಷ ಗಮನ ಹರಿಸಬೇಕು. ಈಗಿಂದಲೇ ಈ ಬಗ್ಗೆ ವ್ಯವಸ್ಥಿತವಾಗಿ ಕ್ರಮ ಕೈಗೊಳ್ಳಬೇಕು. ಯಾರಿಗೂ ತೊಂದರೆಗಳಾಗದಂತೆ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

    ಹೆಚ್ಚು ಜನಸಂದಣಿ ಇರುವ ಭಾಗದಲ್ಲಿ ಮಾಸ್ಕ್ ಧರಿಸಿ ಎಂಬ ಸಲಹೆಯನ್ನ ಅಧಿಕೃತವಾಗಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿಯಲ್ಲಿ ಅಧಿಕೃತವಾಗಿ ಪ್ರಕಟಿಸುವಂತೆ ಆರೋಗ್ಯ ಇಲಾಖೆ ಆಯುಕ್ತರಿಗೆ ತಿಳಿಸಿದರು.

    ಜೀನೋಮಿಕ್ ಸೀಕ್ವೆನ್ಸಿಸ್ ಪರೀಕ್ಷೆ ನೆಡೆಸಲು ರಾಜ್ಯ ಸರ್ಕಾರವೇ ನಿರ್ಧರಿಸಿದೆ. ಈ ಬಗ್ಗೆ ಕೇಂದ್ರದ ಮಾರ್ಗಸೂಚಿ ಇಲ್ಲದಿದ್ದರೂ, ಪರೀಕ್ಷೆಯ ಅಗತ್ಯವಿದೆ. ಇದರಿಂದ ರೋಪಾಂತರಿ ತಳಿ ಬಗ್ಗೆ ಹೆಚ್ಚಿನ ಮಾಹಿತಿ ದೊರೆಯಲಿದೆ ಎಂದರು.

    ವರ್ಷಾಚರಣೆಗಿಲ್ಲ ನಿರ್ಭಂದ:
    ಹೊಸ ವರ್ಷಾಚರಣೆಯ ಸಂದರ್ಭದಲ್ಲ್ಲಿ ನಿರ್ಭಂದ ಹಾಕುವ ಬಗ್ಗೆ ಸದ್ಯಕ್ಕೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪವಿಲ್ಲ. ಶನಿವಾರದ ವೇಳೆಗೆ ಒಂದಿಷ್ಟು ಪರೀಕ್ಷೆ ನಡೆಸಿ ಪ್ರಕರಣಗಳ ಸಂಖ್ಯೆ ಆಧಿರಿಸಿ ಹಾಗೂ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುವುದು. ನಾಳೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಮಿತಿ ಸಲಹೆ ಹಾಗೂ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts