ದಕ್ಷಿಣ ಕನ್ನಡ 1.42 ಲಕ್ಷ ಲೀಟರ್ ಮದ್ಯ ವಶ

ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಏ.19ರವರೆಗೆ ದ.ಕ.ಜಿಲ್ಲೆಯಲ್ಲಿ 5,65,91,543 ರೂ. ಮೌಲ್ಯದ 1,42,520 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ . 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ನಿಯಮ ಉಲ್ಲಂಘನೆ ಸಹಿತ ಒಟ್ಟು 1083 ಎಫ್.ಐ.ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.