More

    ಹತ್ಯೆ ಪ್ರಕರಣಗಳಿಗೆ ತಾರ್ಕಿಕ ಅಂತ್ಯ: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್

    ಮಂಗಳೂರು: ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಕಾರ್ಯಕರ್ತರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ನಾವು ಅವರ ಭಾವನೆಗಳನ್ನು ಗೌರವಿಸುತ್ತೇವೆ. ಈಗಾಗಲೇ ಇಬ್ಬರುವ ಆರೋಪಿಗಳನ್ನು ಬಂಧಿಸಲಾಗಿದ್ದು, ಕೊಲೆಗಡುಕರನ್ನು ಮಟ್ಟ ಹಾಕುವ ವಿಚಾರದಲ್ಲಿ ಸರ್ಕಾರ ಕೈಕಟ್ಟಿಕೊಂಡು ಕುಳಿತಿಲ್ಲ. ಇದಕ್ಕೊಂದು ತಾರ್ಕಿಕ ಅಂತ್ಯ ಹಾಡುತ್ತೇವೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

    ಗುರುವಾರ ಮಂಗಳೂರಿನಲ್ಲಿ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.

    ಕಾನೂನು ಚೌಕಟ್ಟಿನಡಿ ಈಗಾಲೇ ಕಾರ್ಯಾಚರಣೆ ನಡೆಯುತ್ತಿದ್ದು, ಸಭೆಯಲ್ಲಿ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಲಾಗಿದೆ. ನಮ್ಮಲಿರುವ ಮಾಹಿತಿಯನ್ನು ಪೊಲೀಸ್ ಇಲಾಖೆಯೊಂದಿಗೆ ಹಂಚಿಕೊಳ್ಳಗಿದೆ. ಪಿಎಫ್‌ಐ ಸಂಘಟನೆಯನ್ನು ಹತ್ತಿಕ್ಕುವ ಎಲ್ಲ ಪ್ರಯತ್ನಗಳು ನಡೆಯಲಿದೆ. ಕೇರಳವನ್ನು ಸಂಪರ್ಕಿಸುವ ಗಡಿಭಾಗಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಡಿ.ಜೆ. ಹಳ್ಳಿ ಘಟನೆ, ಸಿಎಎ ಗಲಭೆ ಸೇರಿದಂತೆ ವಿವಿಧ ಸೂಕ್ಷ್ಮ ಘಟನೆಗಳನ್ನು ಹತ್ತಿಕ್ಕಲಾಗಿದೆ ಎಂದರು.

    ನಮಗೆ ಪ್ರಾಮಾಣಿಕ ಕಾರ್ಯಕರ್ತರನ್ನು ಕಳೆದುಕೊಂಡ ದುಃಖವಿದೆ. ಹೋರಾಟ ಮಾಡಿಕೊಂಡು ಪಕ್ಷದಲ್ಲಿ ಬೆಳೆದು ಬಂದವನಾಗಿದ್ದು, ಕಾರ್ಯಕರ್ತರ ನೋವು ನನಗೆ ಗೊತ್ತಿದೆ ಎಂದು ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ವೈ. ಭರತ್ ಶೆಟ್ಟಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts