ಕರಾವಳಿ ಕರ್ನಾಟಕದ ಜನಪ್ರಿಯ ಕಥೆಗಾರ ಕೆ.ಟಿ.ಗಟ್ಟಿ ನಿಧನ

kt gatti
Published on

ಮಂಗಳೂರು: ಕನ್ನಡ ನಾಡಿನ ಹೆಸರಾಂತ ಲೇಖಕ, ಕಾದಂಬರಿಕಾರ, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಜನಪ್ರಿಯ ಕಥೆಗಾರ ಕೆ.ಟಿ.ಗಟ್ಟಿ(85) ನಿಧನರಾಗಿದ್ದಾರೆ.

ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯ ಕೂಡ್ಲುವಿನವರಾದ ಕೂಡ್ಲು ತಿಮ್ಮಪ್ಪ ಗಟ್ಟಿ (ಕೆಟಿ ಗಟ್ಟಿ) ಪ್ರಾಧ್ಯಾಪಕರಾಗಿ ದುಡಿದು ನಿವೃತ್ತರಾಗಿದ್ದರು. ಸಣ್ಣ ವಯಸ್ಸಿನಲ್ಲಿಯೇ ಪತ್ರಿಕೆಗಳಿಗೆ ಸರಣಿ ಕಾದಂಬರಿಗಳನ್ನು, ರೇಡಿಯೋ ನಾಟಕಗಳನ್ನು ಬರೆಯುವ ಮೂಲಕ ಹೆಸರುವಾಸಿಯಾಗಿದ್ದರು.

ಮೊದಲಿಗೆ ಉಡುಪಿಯ ಟಿ.ಎಂ.ಪೈ. ಮಹಾವಿದ್ಯಾಲಯದಲ್ಲಿ ಅಧ್ಯಾಪಕರಾಗಿದ್ದರು. ಬಳಿಕ ಭಾರತ ಸರಕಾರದಿಂದ ಪ್ರಾಧ್ಯಾಪಕರಾಗಿ ಇಥಿಯೋಪಿಯಕ್ಕೆ ಪ್ರಯಾಣಿಸಿದ್ದರು. ಕಲಿಕೆಯಲ್ಲಿ ನಿರಂತರ ಆಸಕ್ತಿ ಹೊಂದಿದ್ದ ಅವರು ಇಂಗ್ಲೆಂಡಿನ ಟ್ರಿನಿಟಿ ಮತ್ತು ಆಕ್ಸಫರ್ಡ್ ಕಾಲೇಜುಗಳಿಂದ ಇಂಗ್ಲಿಷ್ ಕಲಿಕೆಯಲ್ಲಿ ಡಿಪ್ಲೋಮ ಪದವಿ ಪೂರೈಸಿದ್ದರು.

ಇಥಿಯೋಪಿಯದಿಂದ ಹಿಂತಿರುಗಿದ ನಂತರ ಅವರು ಉಜಿರೆಯಲ್ಲಿ ವಾಸವಾಗಿ ಕೃಷಿ ಮತ್ತು ಸಾಹಿತ್ಯ ರಚನೆಯಲ್ಲಿ ತೊಡಗಿದ್ದರು. ಶಬ್ದಗಳು (೧೯೭೬), ಸೌಮ್ಯ (೧೯೭೮), ಮನೆ, ರಾಮಯಜ್ಞ, ನಿರಂತರ, ಅಬ್ರಾಹ್ಮಣ, ಅಮುಕ್ತ, ಅವಿಭಕ್ತರು, ಕರ್ಮಣೇ ವಾಧಿಕಾರಸ್ತೇ, ಕೂಪ, ಪೂಜಾರಿ, ಬಿಸಿಲುಗುದುರೆ, ಮೃತ್ಯೋರ್ಮಾ ಅಮೃತಂ ಗಮಯ, ಯುಗಾಂತರ, ಶಿಲಾತಪಸ್ವಿ, ಸ್ವರ್ಣಮೃಗ, ಅರಗಿನ ಮನೆ ಗಟ್ಟಿ ಅವರ ಕಾದಂಬರಿಗಳಾಗಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net