More

    ದಲಿತರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹ: ಬಳ್ಳಾರಿ ಡಿಸಿ ಕಚೇರಿ ಆವರಣದಲ್ಲಿ ದಸಂಸ ಪ್ರತಿಭಟನೆ

    ಬಳ್ಳಾರಿ: ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

    ದಲಿತರ ಮೇಲೆ ದೌರ್ಜನ್ಯ ನಡೆಸುವವರಿಗೆ ಮರಣ ದಂಡನೆ ಶಿಕ್ಷೆ ವಿಧಿಸಬೇಕು. ದೌರ್ಜನ್ಯ ನಡೆದರೆ ಅದಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಸಂಬಂಧಿತ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಬೇಕು. ದೌರ್ಜನ್ಯಕ್ಕೆ ಒಳಗಾಗುವ ಕುಟುಂಬದವರಿಗೆ ತ್ವರಿತ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಬೇಕು. ಈ ಕುರಿತ ಪ್ರಕರಣಗಳ ತ್ವರಿತ ವಿಚಾರಣೆಗೆ ಜಿಲ್ಲಾ ಮಟ್ಟದಲ್ಲಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬೇಕು. ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಲಾಯಿತು. ದಸಂಸ ಜಿಲ್ಲಾ ಅಧ್ಯಕ್ಷ ಅರ್ಜುನ್ ಹೆಗಡೆ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಭಂಡಾರಿ, ವಿಭಾಗೀಯ ಉಪಾಧ್ಯಕ್ಷ ದಾನಪ್ಪ, ಮುಖಂಡ ಎರುಕಲಸ್ವಾಮಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts