ಧರ್ಮಶಾಲಾ: ಮೀಸಲಾತಿ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಖಂಡಿಸಿ ದಲಿತ ಸಮುದಾಯ ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷವು ‘ಚಪ್ಪಲಿಯಲ್ಲಿ ಹೊಡಿ’ ಆಂದೋಲನ ನಡೆಸಲಿದೆ ಎಂದು ಕೇಂದ್ರ ಸಚಿವ ರಾಮದಾಸ್ ಅಠವಳೆ ತಿಳಿಸಿದ್ದಾರೆ.
ಇದನ್ನೂ ಓದಿ: Mpox vaccine: ಮಂಕಿ ಪಾಕ್ಸ್ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮತಿ!
ಅಮೆರಿಕದ ಜಾರ್ಜ್‌ಟೌನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಜೊತೆಗಿನ ಸಂವಾದದಲ್ಲಿ ಇತ್ತೀಚೆಗೆ ಮಾತನಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದಾಗ ಮೀಸಲಾತಿಯನ್ನು ತೆಗದುಹಾಕುವ ಬಗ್ಗೆ ಕಾಂಗ್ರೆಸ್ ಯೋಚಿಸುತ್ತದೆ ಎಂದು ಹೇಳಿದ್ದರು. ಈಗ ಸಮಾನತೆ ಪರಿಸ್ಥಿತಿ ಇಲ್ಲ ಎಂದು ಅವರು ಹೇಳಿದ್ದಾರೆ.
ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಅಠಾವಳೆ, ‘ದಲಿತರು, ಹಿಂದುಳಿದ ವರ್ಗ, ಆದಿವಾಸಿಗಳಿಗೆ ನೀಡಿದ ಮೀಸಲಾತಿಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಮತ್ತು ಅದನ್ನು ಮಾಡಲು ಪ್ರಯತ್ನ ಮಾಡಿದರೆ ಅದರವ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಹೇಳಿದರು.
ಈ ಸಂಬಂಧ ದಲಿತ ಸಮುದಾಯ ಮತ್ತು ರಿಪಬ್ಲಿಕನ್ ಪಕ್ಷವು ರಾಷ್ಟ್ರವ್ಯಾಪಿ ಹೋರಾಟ ನಡೆಸಲಾಗುವುದು ಅವರ ವಿರುದ್ಧ ಶೂಗಳನ್ನು ಎಸೆಯಲಾಗುವುದು ಎಂದು ತಿಳಿಸಿದರು.
“ರಾಹುಲ್ ಗಾಂಧಿ ಒಬ್ಬ ನಿಷ್ಪ್ರಯೋಜಕ ವ್ಯಕ್ತಿ. ಅವರು ಇಂಗ್ಲೆಂಡ್ ಅಥವಾ ಅಮೆರಿಕಕ್ಕೆ ಹೋದಾಗಲೆಲ್ಲಾ ಭಾರತದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಮುಂದಿನ ದಿನಗಳಲ್ಲಿ ಜವಾಬ್ದಾರಿಯುತವಾಗಿ ಹೇಳಿಕೆಗಳನ್ನು ನೀಡಬೇಕು ಎಂದು ಸಲಹೆ ನೀಡಿದರು.
ಮೋದಿ ಅವಧಿಯಲ್ಲಿ ದೇಶದ ಸಾಲ 182 ಲಕ್ಷ ಕೋಟಿಗೆ ತಲುಪಿದೆ: ಸಿಎಂ ಸಿದ್ದರಾಮಯ್ಯ