More

  ಮಧ್ಯಪ್ರದೇಶ: ಹೆಂಡತಿಯನ್ನು ಚುಡಾಯಿಸಿದ್ದಕ್ಕೆ ದಲಿತ ದಂಪತಿ ಮೇಲೆ ಹಲ್ಲೆ, ಶೂಗಳ ಹಾರ ಹಾಕಿಸಿದ ದುಷ್ಕರ್ಮಿಗಳು

  ಅಶೋಕ್​ ನಗರ (ಮಧ್ಯಪ್ರದೇಶ): ಮಧ್ಯಪ್ರದೇಶದ ಅಶೋಕ್ ನಗರ ಜಿಲ್ಲೆಯಲ್ಲಿ ದಲಿತ ವೃದ್ಧ ದಂಪತಿ ಮೇಲೆ ಹಲ್ಲೆ ಮಾಡಿ, ಶೂಗಳ ಹಾರ ಹಾಕಿಸಿರುವ ಘಟನೆ ಧರಿಸುವಂತೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

  ಇದನ್ನೂ ಓದಿ: ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌: ಶಾಸಕ ಶ್ರೀನಿವಾಸ್ ವಿರುದ್ಧ ಹರಿಹಾಯ್ದ ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ..

  ಮುಂಗೋಲಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲೋರಾ ಗ್ರಾಮದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು ತಲೆಮರೆಸಿಕೊಂಡಿರುವ 10 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  ದಂಪತಿಯ ಮಗ ಆರೋಪಿಗಳಲ್ಲಿ ಒಬ್ಬನ ಹೆಂಡತಿಯನ್ನು ಚುಡಾಯಿಸಿದ್ದಾನೆ ಎಂದು ಹಲ್ಲೆಕೋರರು ಆರೋಪ ಮಾಡಿದ್ದಾರೆ. ಈ ಘಟನೆ ನಡೆದ ಬಳಿಕ ದಲಿತ ಕುಟುಂಬವು ಗ್ರಾಮವನ್ನು ತೊರೆದಿದ್ದಾರೆ ಎಂದು ಮುಂಗೋಲಿ ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಸಂಜೆ 65 ವರ್ಷದ ದಲಿತ ವ್ಯಕ್ತಿ ಮತ್ತು ಆತನ 60 ವರ್ಷ ವಯಸ್ಸಿನ ಪತ್ನಿಯನ್ನು ಕಂಬಕ್ಕೆ ಕಟ್ಟಿ, ಥಳಿಸಿ, ಶೂಗಳ ಹಾರವನ್ನು ಹಾಕಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

  ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಶನಿವಾರ ಪೊಲೀಸರು 10 ಜನರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 147 (ಗಲಭೆ), 149 (ಸಾಮಾನ್ಯ ಉದ್ದೇಶದಿಂದ ಕಾನೂನುಬಾಹಿರ ಸಭೆ), 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 294 (ಅಶ್ಲೀಲ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಾಯ್ದೆ) ಮತ್ತು 506 (ಅಪರಾಧ ಬೆದರಿಕೆ) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಎಲ್ಲಾ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಪತ್ತೆ ಹಚ್ಚುವ ಪ್ರಯತ್ನ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನ ಬಂಧನ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts