More

    ತಾಲೂಕು ಆಡಳಿತ ತಾರಟೆ ತೆಗೆದುಕೊಂಡ ದಲಿತ ಮುಖಂಡರು

    ಚಾಮರಾಜನಗರ: ಕೊಳ್ಳೇಗಾಲ ತಾಲೂಕು ಆಡಳಿತಾಧಿಕಾರಿಗಳು ಡಾ. ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು ಸರಳವಾಗಿ ಆಚರಿಸಿರುವುದಕ್ಕೆ ದಲಿತ ಮುಖಂಡರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


    ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆ ಅಂಗವಾಗಿ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿಗಳು ಶನಿವಾರ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಡಾ.ಬಾಬು ಜಗಜೀವನ ರಾಮ್ ಅವರ ಜಯಂತಿ ಆಚರಣೆ ಸಂಬಂಧ ಸಮುದಾಯದವರ ಸಭೆ ಕರೆದಿಲ್ಲ. ತಾಲೂಕು ಆಡಳಿತ ಸರ್ವಾಧಿಕಾರಿ ಧೋರಣೆ ತೋರಿದೆ ಎಂದು ಬೇಸರ ವ್ಯಕ್ತಪಡಿಸಿದರು.


    ಈ ಸಬಂಧ ದಲಿತ ಸಂಘರ್ಷ ಸಮಿತಿ ಸಂಚಾಲಕ ಬೆಳ್ಳಿಯಪ್ಪ ಮಾತನಾಡಿ, ತಾಲೂಕು ಕಚೇರಿಯಲ್ಲಿ ಡಾ.ಜಗಜೀವನ ರಾಮ್ ಅವರ ಜಯಂತಿ ಸರಳವಾಗಿ ಆಚರಣೆ ಮಾಡುವ ಮೂಲಕ ದಲಿತ ಸಮುದಾಯಕ್ಕೆ ಮತ್ತು ರಾಷ್ಟ್ರ ನಾಯಕರಿಗೆ ಅವಮಾನ ಮಾಡಿದಂತಾಗಿದೆ. ಅದಲ್ಲದೆ, ಈ ಬಗ್ಗೆ ಜನಾಂಗದವರ ಜತೆ ಪೂರ್ವಭಾವಿ ಸಭೆ ನಡೆಸಿಲ್ಲ. ಚಾಮರಾಜನಗರದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದಾ ಅವರು ಸಭೆ ನಡೆಸಿ ಏ.5ರಂದು ಡಾ. ಜಗಜೀವನ ರಾಮ್ ಜಯಂತಿ ಹಿನ್ನೆಲೆಯಲ್ಲಿ ಬೆಳ್ಳಿ ರಥದಲ್ಲಿ ಭಾವಚಿತ್ರ ಇಟ್ಟು ಮೆರವಣಿಗೆ ಮಾಡಿದ್ದಾರೆ. ಕೊಳ್ಳೇಗಾಲದಲ್ಲಿ ಏಕೆ ಮಾಡಿಲ್ಲ ಎಂದು ತಹಸೀಲ್ದಾರ್ ಮಂಜುಳಾ ಅವರನ್ನು ತರಾಟೆಗೆ ತೆಗೆದುಕೊಂಡರು.


    ತಹಸಿಲ್ದಾರ್ ಮಂಜುಳಾ ಪ್ರತಿಕ್ರಿಯಿಸಿ, ನಾನು ಸರ್ವಾಧಿಕಾರಿಯಾಗಿ ನಡೆದುಕೊಂಡಿಲ್ಲ, ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿ ಇರುವುದರಿಂದ ಜನಾಂಗದವರ ಜತೆ ಸೇರಿ ತಾಲೂಕು ಕಚೇರಿಯಲ್ಲಿ ಸರಳವಾಗಿ ಜಯಂತಿ ಆಚರಿಸಲಾಗಿದೆ ಎಂದರು.


    ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸುವಂತೆ ದಲಿತ ಮುಖಂಡ ದಿಲೀಪ್ ಸಿದ್ದಪಾಜಿ ತಾಲೂಕು ಆಡಳಿವನ್ನು ಒತ್ತಾಯಿಸಿದರು.


    ಅಭಿಪ್ರಾಯ ಸಂಗ್ರಹದ ನಂತರ ಸಭೆ ಉದ್ದೇಶಿಸಿ ತಹಸೀಲ್ದಾರ್ ಮಂಜುಳಾ ಮಾತನಾಡಿ, ಏ.14ರಂದು ಗ್ರಾಮ ಪಂಚಾಯಿತಿಗಳಲ್ಲಿ, ಶಾಲಾ, ಕಾಲೇಜುಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಇಟ್ಟು ಪೂಜೆ ಸಲ್ಲಿಸಿ ಜಯಂತಿ ಆಚರಿಸಬೇಕೆಂದು ಸೂಚನೆ ನೀಡಲಾಗಿದೆ ಎಂದು ಹೇಳಿದರು.

    ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೆಶಕ ಕೇಶವಮೂರ್ತಿ, ಬಿಇಒ ಮಂಜುಳಾ, ತಾಪಂ ಎಡಿ ಗೋಪಾಲಕೃಷ್ಣ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts