More

    ದಲಿತರ ಹಕ್ಕುಗಳಿಗಾಗಿ ಹೋರಾಟ

    ಕೂಡ್ಲಿಗಿ: ಅಸ್ಪೃಶ್ಯತೆ ಆಚರಣೆಯನ್ನು ಸಂಪೂರ್ಣ ನಿರ್ಮೂಲನೆ ಮಾಡುವುದು ಸಂಘಟನೆಯ ಮುಖ್ಯ ಗುರಿಯಾಗಿದೆ ಎಂದು ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಡಿ.ಎಚ್.ದುರುಗೇಶ್ ತಿಳಿಸಿದರು.

    ಪ್ರತಿಯೊಬ್ಬರು ಸಂವಿಧಾನವನ್ನು ಪೂಜಿಸಲಿ

    ತಾಲೂಕಿನ ಸೂಲದಹಳ್ಳಿ ಗ್ರಾಮದಲ್ಲಿ ಸೋಮವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿದರು. ಸಮಿತಿಯು ದಲಿತರ ಹಕ್ಕುಗಳಿಗಾಗಿ ಹೋರಾಟ ಮಾಡಲಿದೆ. ಅಲ್ಲದೆ ಯಾರೊಬ್ಬ ದಲಿತರು ಸರ್ಕಾರ ಸೌಲಭ್ಯಗಳಿಂದ ವಂಚಿತರಾಗಬಾರದು ಎಂದರು.
    ಪ್ರತಿಯೊಬ್ಬರು ಶಿಕ್ಷಣವನ್ನು ಪಡೆಯಬೇಕು. ಶಿಕ್ಷಣದಿಂದ ಯಾರೂ ವಂಚಿತರಾಗಬಾರದು. ಅಂಬೇಡ್ಕರ್ ಅವರು ಉನ್ನತ ಶಿಕ್ಷಣವನ್ನು ಪಡೆದು ಭಾರತದ ಸಂವಿಧಾನವನ್ನು ರಚನೆ ಮಾಡಿದರು. ಸಂವಿಧಾನ ನಮ್ಮ ಜನ್ಮಸಿದ್ಧ ಹಕ್ಕಾಗಿದೆ. ಪ್ರತಿಯೊಬ್ಬರು ಸಂವಿಧಾನವನ್ನು ಪೂಜಿಸಬೇಕು. ಸಂವಿಧಾನ ಉಳುವಿಗಾಗಿ ನಾವೆಲ್ಲರೂ ಶ್ರಮಿಸಬೇಕು ಎಂದು ತಿಳಿಸಿದರು.

    ಇದನ್ನೂ ಓದಿ: ಸಂಕ್ರಾಂತಿ ಹಬ್ಬಕ್ಕೆ ಹಲವು ಸಿನಿಮಾ ರಿಲೀಸ್​; ಮಹೇಶ್​ ಬಾಬು ಚಿತ್ರಕ್ಕೆ ಎದುರಾಗಲಿದೆ ಭಾರೀ ಪೈಪೋಟಿ!

    ಸಮಿತಿಯ ಜಿಲ್ಲಾ ಸಂಚಾಲಕ ಬ.ಮರಿಸ್ವಾಮಿ, ತಾಲೂಕು ಸಂಘಟನಾ ಸಂಚಾಲಕ ಬಿ.ನಾಗರಾಜ, ಪ್ರಮುಖರಾದ ವೆಂಕಟೇಶ್ ಸೂಲದಹಳ್ಳಿ,ನುಂಕೇಶ್, ಕೊಟ್ರೇಶ್, ಅನಿಲ್, ನಾಗರಾಜ, ಬಿ.ರಾಘವೇಂದ್ರ, ಪರಶುರಾಮ, ಸೂಲದಹಳ್ಳಿ ಸಿದ್ದಪ್ಪ ಇನ್ನಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts