More

    ತಾನು ಓದಿದ ಶಾಲೆಯ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದ ದಲಿತ ಯುವಕನಿಗೆ ಥಳಿತ; ಚುನಾವಣಾ ಕರ್ತವ್ಯ ನೆಪವೊಡ್ಡಿ ಆರೋಪಿಗಳನ್ನು ಬಂಧಿಸದ ಪೊಲೀಸರು

    ಚೆನ್ನೈ: ತಾನು ಓದಿದ ಶಾಲೆಯ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ದಲಿತ ಸಮುದಾಯದ ಯುವಕನನ್ನು ಅಮಾನುಷವಾಗಿ ಥಳಿಸಿರುವ ಘಟನೆ ತಮಿಳುನಾಡಿದ ತಿರುಪ್ಪೂರು ಜಿಲ್ಲೆಯ ಅಮರಾವತಿಪಾಳ್ಯಂನಲ್ಲಿ ನಡೆದಿದೆ.

    ಹಲ್ಲೆಗೊಳಗಾದ ಶ್ಯಾಮ್​ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ತಿರುಪ್ಪೂರು ಮೆಡಿಕಲ್ ಕಾಲೇಜು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ಕಾರ್ತಿಕ್ ಹಾಗೂ ಬಾಲಸುಬ್ರಮಣಿಯಂ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರ್ಚ್​ 22ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಇದನ್ನೂ ಓದಿ: ಬೆಟ್ಟಿಂಗ್​ ವ್ಯಾಮೋಹಕ್ಕೆ ಬಿದ್ದು 1.5 ಕೋಟಿ ರೂ. ಕಳೆದುಕೊಂಡ ಪತಿ; ಕಿರುಕುಳ ತಾಳಲಾರದೆ ಪ್ರಾಣಬಿಟ್ಟ ಪತ್ನಿ

    ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು​, ಸಂತ್ರಸ್ತ ಶ್ಯಾಮ್​​ಕುಮಾರ್​ ಮಾರ್ಚ್​ 22ರಂದು ನಾನು ಓದಿದ ಶಾಲೆಯ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲೆಂದು ಕೆಲಸಕ್ಕೆ ಅರ್ಧ ದಿನ ರಜೆ ತೆಗೆದುಕೊಂಡು ಬಂದಿದ್ದ. ಈ ವೇಳೆ ಆರೋಪಿ ಕಾರ್ತಿಕ್​ ಸಂಬಂಧಿಯಾದ ಬಾಲಸುಬ್ರಮಣಿಯಂ ಶ್ಯಾಮ್​ಕುಮಾರ್​ನನ್ನು ಕಾರ್ಯಕ್ರಮಕ್ಕೆ ಬಂದಿದ್ದನ್ನು ಪ್ರಶ್ನಿಸಿದ್ದಾನೆ. ವಾರ್ಷಿಕೋತ್ಸವದಲ್ಲಿ ಬಂದಿರುವುದಾಗಿ ಸಂತ್ರಸ್ತ ಹೇಳಿದಾಗ ಕುಪಿತಗೊಂಡ ಆರೋಪಿಗಳು ಆತನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಾರೆ.

    ಆರೋಪಿಗಳು ಸಂತ್ರಸ್ತನ ಹೊಟ್ಟೆ, ಎದೆ ಮತ್ತು ಕುತ್ತಿಗೆ ಭಾಗದಲ್ಲಿ ಹಲ್ಲೆ ನಡೆಸಿದ್ದು, ಸಂತ್ರಸ್ತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ FIR ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ. ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವುದರಿಂದ ಅವರನ್ನು ಇನ್ನೂ ಬಂಧಿಸಿಲ್ಲ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts