ದಲಿತ ಮಹಿಳೆ ಮೇಲೆ ದೌರ್ಜನ್ಯ; ಬೆಂಕಿ ಹಚ್ಚಿ ಹತ್ಯೆ

Dalit
Published on

ಬಾರ್ಮೆರ್​: ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ದಲಿತ ಸಮುದಾಯದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆಕೆಗೆ ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಬಾರ್ಮೆರ್​ನ ಬಾಡ್ಮೇರ್​ ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆ 30 ವರ್ಷದವರಾಗಿದ್ದು ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿ ಮತ್ತು ಮಹಿಳೆ ಒಂದೇ ಗ್ರಾಮದವರಾಗಿದ್ದು ಮನೆಯಲ್ಲಿ ಯಾರು ಇಲ್ಲದ ವೇಳೆ ಕೃತ್ಯ ಎಸಗಲಾಗಿದೆ ಎಂದು ವರದಿಯಾಗಿದೆ.

ಒಂಟಿಯಾಗಿದ್ದ ವೇಳೆ ಕೃತ್ಯ

ಘಟನೆ ಸಂಬಂಧ ಪೊಲೀಸರು ಶಕೂರ್​​​ ಖಾನ್ ಎಂಬುವವನ್ನು ಮಹಿಳೆ ಮನೆಯಲ್ಲಿ ಒಂಟಿಯಾಗಿದ್ದನ್ನು ಗಮನಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿ ಆ್ಯಸಿಡ್​ ಹೋಲುವಂತಹ ವಸ್ತುವನ್ನು ಆಕೆಯ ಮೈ ಮೇಲೆ ಎರಚಿ ಬೆಂಕಿ ಹಚ್ಚಿದ್ದಾನೆ.

ಮಹಿಳೆಗೆ ಶೇ.50ರಷ್ಟು ಸುಟ್ಟ ಗಾಯಗಳಾಗಿದ್ದವು ಮತ್ತು ಅವರಿಗೆ ಜೋಧ್​ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ಧಾರೆ.

ಕುಟುಂಬಸ್ಥರ ಪ್ರತಿಭಟನೆ

ಮಹಿಳೆ ಮೃತಪಟ್ಟಿರುವ ವಿಚಾರ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು ಮತ್ತು ದುರು ನೀಡಲು ಹೋದಾಗ ನಮ್ಮ ಜೊತೆ ಇಬ್ಬರು ಪೊಲೀಸ್​ ಅಧಿಕಾರಿಗಳು ಅಸಭ್ಯವಾಗಿ ವರ್ತಿಸಿದ್ದಾರೆ. ಸರ್ಕಾರದ ಕಡೆಯಿಂದ 1 ಕೋಟಿ ರೂಪಾಯಿ ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ನೀಡಬೇಕು ಎಂದು ಆಗ್ರಹಿಸಿ ಮಹಿಳೆಯ ಕುಟುಂಬಸ್ಥರು ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆ ರಮದ್ಯ ಪ್ರವೇಶಿಸಿದ ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ಸರ್ಕಾರದೊಂದಿಗೆ ಚರ್ಚಿಸಿ ಗರಿಷ್ಠ ಪರಿಹಾರವನ್ನು ಕೊಡಿಸಲಾಗುವುದು. ನಿಮ್ಮ ಜೊತೆ ಅಸಭ್ಯವಾಗಿ ವರ್ತಿಸಿದ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ ಮೇಲೆ ಕುಟುಂಬಸ್ಥರು ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ನೀಡಿದರು.

ನಿಯೋಗ ಭೇಟಿ

ಮೃತ ಮಹಿಳೆ ಮನೆಯ ಸದಸ್ಯರನ್ನು ಸಂಸದ ಪಿ.ಸಿ.ಚೌಧರಿ, ಶಾಸಕರಾದ ಸತೀಸ್​ ಪೋನಿಯಾ, ಯೋಗೇಶ್ವರ್​​ ಗಾರ್ಗ್​​ ಅವರಿದ್ದ ನಿಯೋಗ ಭೇಟಿ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net