ದಲಿತ ಮಹಿಳೆಯರಿಗೆ ಯತ್ನಾಳರಿಂದ ಅವಹೇಳನ

18-KGL-4, rekaramesh
ಕೊಳ್ಳೇಗಾಲ ನಗರಸಭೆ ಅಧ್ಯಕ್ಷೆ ರೇಖಾ ರಮೇಶ್
Published on

ಕೊಳ್ಳೇಗಾಲ: ದಲಿತ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮಾತನಾಡಿರುವುದು ಖಂಡನೀಯ ಎಂದು ನಗರಸಭೆ ಅಧ್ಯಕ್ಷೆ ರೇಖಾ ರಮೇಶ್ ಹೇಳಿದರು.

ಪಟ್ಟಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುದ್ದಿ ವಾಹಿನಿಗಳಿಗೆ ನಾಡಹಬ್ಬ ದಸರಾ ಉದ್ಘಾಟನೆ ಮಾಡುತ್ತಿರುವ ಬಗ್ಗೆ ಹೇಳಿಕೆ ನೀಡುವ ವೇಳೆ ಬಸನಗೌಡ ಪಾಟೀಲ ಯತ್ನಾಳ ಅವರು ಸನಾತನ ಧರ್ಮದವರು ಮಾತ್ರ ದಸರಾದಲ್ಲಿ ಚಾಮುಂಡಿ ದೇವಿಗೆ ಪುಷ್ಪಾರ್ಚನೆ ಮಾಡಬೇಕು. ದಲಿತ ಮಹಿಳೆಯರು ಸಹ ಮಾಡಬಾರದು ಎಂಬ ಸಂವಿಧಾನ ವಿರೋಧಿ ಹೇಳಿಕೆಯನ್ನು ನೀಡಿ ದ್ದಾರೆ. ಈ ಹೇಳಿಕೆ ಸರಿಯಲ್ಲ. ಬಿಜೆಪಿ ಪಕ್ಷದವರು ಜಾತಿ ಆಧಾರದಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪ್ರಸ್ತುತ ದಲಿತ ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದು, ಮುಂಚೂಣಿಯಲ್ಲಿದ್ದಾರೆ. ಬಸನಗೌಡ ಪಾಟೀಲ ಯತ್ನಾಳ ಅವರು ದಲಿತ ಮಹಿಳೆಯರನ್ನು ಉದ್ದೇಶಿಸಿ ಅವಹೇಳನಕಾರಿಯಾಗಿ ಮಾತನಾಡಿರುವುದಕ್ಕೆ ದಲಿತರು ಮುಂದೆ ತಕ್ಕ ಪಾಠ ಕಲಿಸುತ್ತಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net