ಆಲ್ದೂರು: ರಾಜ್ಯದಲ್ಲಿ ಕಾಂಗ್ರೆಸ್ ದಲಿತರು, ಹಿಂದುಳಿದವರನ್ನು ವೋಟ್‌ಬ್ಯಾಂಕ್ ಆಗಿ ಮಾಡಿಕೊಂಡಿದೆ. ದೇಶಕ್ಕೆ ಸಂವಿಧಾನ ನೀಡಿದ ಅಂಬೇಡ್ಕರ್ ಅವರ ಅಂತ್ಯಸಂಸ್ಕಾರಕ್ಕೆ ಜಾಗ ನೀಡಿರಲಿಲ್ಲ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ದೀಪಕ್ ದೊಡ್ಡಯ್ಯ ಆರೋಪಿಸಿದರು.
ಮೀಸಲಾಲಿ ರದ್ದತಿ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ಅಮೇರಿಕಾದಲ್ಲಿ ಹೇಳಿಕೆ ನೀಡಿದ್ದನ್ನು ವಿರೋಧಿಸಿ ಬಿಜೆಪಿ ಎಸ್ಸಿ ಮೋರ್ಚಾದಿಂದ ಗುರುವಾರ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿ, ರಾಹುಲ್ ಗಾಂಧಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ದೂರಿದರು.
ಎಸ್ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಕಾಂಗ್ರೆಸ್ ದಲಿತ ವಿರೋಧಿ ನೀತಿ ಅನುಸರಿಸಿದ್ದರಿಂದಲೇ ದೇಶದಲ್ಲಿ ಸಂಸತ್ ಚುನಾವಣೆಯಲ್ಲಿ 99 ಸ್ಥಾನಕ್ಕೆ ಕುಸಿದಿದೆ ಎಂದರು.
ಆಲ್ದೂರು ಮಂಡಲ ಅಧ್ಯಕ್ಷ ರವಿ ಬಸರವಳ್ಳಿ, ಜಿಲ್ಲಾ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಶಂಕರ್,
ನಾಗೇಶ್, ಸಂಪತ್, ಅರವಿಂದ್, ರವೀಂದ್ರ, ಪ್ರತಿಭಾ ನವೀನ್, ಸಿಂಧೂಕುಮಾರ್, ಭವ್ಯಾ, ದೀಪಾ ಇತರರಿದ್ದರು.