ಮಂಡ್ಯ: ದಲಿತರು ದೇವಸ್ಥಾನ ಪ್ರವೇಶಿಸಿ ಪೂಜೆ ಸಲ್ಲಿಸಿದರೆಂಬ ಕಾರಣಕ್ಕೆ ಸವರ್ಣೀಯರು ಉತ್ಸವಮೂರ್ತಿಯನ್ನು ಹೊರತಂದು, ದೇವಾಲಯದ ನಾಮಫಲಕ ಆಚೆ ಎಸೆದು ಆಕ್ರೋಶ ಹೊರಹಾಕಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕಾಲಭೈರವೇಶ್ವರ ದೇವಾಲಯಕ್ಕೆ ದಲಿತರು ಪ್ರವೇಶಿಸಿ ಪೂಜೆ ಸಲ್ಲಿಸಿದ ಹಿನ್ನೆಲೆ ಈ ಘಟನೆ ನಡೆದಿದ್ದು, ಸದ್ಯ ಗ್ರಾಮದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಘಟನೆ ಹಿನ್ನೆಲೆ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದುಮ ಯಾವುದೇ ಅಹಿತಕರ ಘಟನೆ ಬಾರದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
ಘಟನೆಯ ಹಿನ್ನೆಲೆ?
ಕಳೆದ ಎರಡು ವರ್ಷಗಳ ಹಿಂದೆ ಗ್ರಾಮದಲ್ಲಿ ದೇವಾಲಯವನ್ನು ಪುನರ್ ನಿರ್ಮಾಣ ಮಾಡಲಾಗಿತ್ತು. ಇದಾದ ಬಳಿಕ ದೇವಾಲಯವು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿತ್ತು. ದೇವಾಲಯವು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುತ್ತಿದ್ದಂತೆ ದಲಿತರ ಪ್ರವೇಶಕ್ಕೆ ಅವಕಾಶ ನೀಡುವಂತೆ ಆಗ್ರಹ ಕೇಳಿ ಬಂದಿತ್ತು. ಈ ಸಂಬಂಧ ದಲಿತರು ಹಾಗೂ ಸವರ್ಣೀಯರ ನಡುವೆ ಎರಡು ಬಾರಿ ಶಾಂತಿ ಸಭೆ ನಡೆಸಲಾಗಿದ್ದು, ಇದು ವಿಫಲವಾಗಿದೆ.
ದಲಿತರ ದೇಗುಲ ಪ್ರವೇಶಕ್ಕೆ ಸವರ್ಣೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಗುಲ ಅವರೇ ಇಟ್ಟುಕೊಳ್ಳಲಿ, ದೇವರನ್ನ ಕೊಂಡೊಯುತ್ತೇವೆ. ಕೂಲಿ ಹಣದಿಂದ ದೇಗುಲ ನಿರ್ಮಿಸಿದ್ದೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಗ್ರಾಮದ ಕೆಲವರಿಂದ
ದಲಿತರ ದೇವಾಲಯ ಪ್ರವೇಶಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಮಾಜಿ ಶಾಸಕ ಎಂ ಶ್ರೀನಿವಾಸ್ ಸವರ್ಣೀಯರ ಮನವೊಲಿಸಲು ಯತ್ನಿಸಿದ್ದಾರೆ. ತಹಶಿಲ್ದಾರ್, ಸಮಾಜ ಕಲ್ಯಾಣ, ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಮನವೊಲಿಕೆಗೆ ಯತ್ನಿಸಿದ್ದು, ಯಾರ ಮನವಿಗೂ ಗ್ರಾಮಸ್ಥರು ಬಗ್ಗಿಲ್ಲ. ಕಡೆಗೆ ಸಾಮಾಜಿಕ ನ್ಯಾಯದಂತೆ ದಲಿತರ ದೇವಾಲಯ ಪ್ರವೇಶಕ್ಕೆ ಪೊಲೀಸ್ ಭದ್ರತೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ದಲಿತರ ದೇವಾಲಯ ಪ್ರವೇಶಿಸುತ್ತಿದ್ದಂತೆ ಇನ್ಮುಂದೆ ನಾವು ದೇವಾಲಯ ಪ್ರವೇಶ ಮಾಡಲ್ಲ ಎಂದು ಸವರ್ಣೀಯರು ಹೇಳುತ್ತಿದ್ದಾರೆ. ಸದ್ಯಕ್ಕೆ ದೇವಸ್ಥಾನ ಬಾಗಿಲು ಬಂದ್ ಮಾಡಲಾಗಿದ್ದು, ಎಂದಿನಂತೆ ಮತ್ತೆ ಸಂಜೆ ಓಪನ್ ಆಗಲಿದೆ. ಜಿಲ್ಲಾಡಳಿತ ದೇವಸ್ಥಾನಕ್ಕೆ ಎಲ್ಲರಿಗೂ ಅವಕಾಶ ಮಾಡಿಕೊಟ್ಟಿದೆ. ಸವರ್ಣೀಯರು ಉತ್ಸವ ಮೂರ್ತಿಯನ್ನು ಮತ್ತೊಂದು ಕೊಠಡಿಯಲ್ಲಿ ಇಟ್ಟಿದ್ದು, ಸಂಜೆ ಮತ್ತೆ ಉತ್ಸವ ಮೂರ್ತಿಯನ್ನ ದೇವಸ್ಥಾನಕ್ಕೆ ತೆಗೆದುಕೊಂಡು ಹೋಗಲು ಮುಜರಾಯಿ ಇಲಾಖೆ ತೀರ್ಮಾನಿಸಿದೆ.
ಮಹಿಳೆಯೊಂದಿಗೆ BJP MLA ಆಪ್ತನ ಖಾಸಗಿ Video Viral; ನೆಟ್ಟಿಗರು ಫುಲ್ ಗರಂ
ಆಗಿರುವ ತಪ್ಪನಾದರೂ ಒಪ್ಪಿಕೊಂಡು ಕ್ಷಮೆ ಕೇಳಿ, ಇದು ನನ್ನ ಸವಿನಯ ಮನವಿ: ಪ್ರಧಾನಿ ಮೋದಿಗೆ CM Siddaramaiah ತಿರುಗೇಟು