ಗ್ಯಾಸ್ ಸೋರಿಕೆಯಿಂದ ಮನೆಗೆ ಹಾನಿ

ಯಳಂದೂರು: ತಾಲೂಕಿನ ಅಂಬಳೆ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಿಲಿಂಡರ್‌ಗೆ ಬೆಂಕಿ ತಗುಲಿ ಮನೆಗೆ ಹಾನಿಯಾಗಿದೆ.

ಗ್ರಾಮದ ಶೇಷಾದ್ರಿ ಅವರ ಗುಡಿಸಲಿನಲ್ಲಿ ಅವರ ತಾಯಿ ವೆಂಕಟರಂಗಮ್ಮ ಅಡುಗೆ ಮಾಡುವಾಗ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿ ಇಡೀ ಮನೆಗೆ ಬೆಂಕಿ ಆವರಿಸಿದೆ. ಬೆಂಕಿಯ ಕೆನ್ನಾಲಿಗೆ ಕಂಡು ಗಾಬರಿಯಾದ ಮನೆಯವರ ತಕ್ಷಣ ಹೊರಓಡಿದ್ದಾರೆ.

ತಕ್ಷಣ ನೆರೆಹೊರೆಯವರು, ನೀರು, ಅಲ್ಲೇ ಇದ್ದ ಮರಳನ್ನು ಹಾಕಿ ಬೆಂಕಿಯನ್ನು ನಂದಿಸಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಮನೆಗೆ ಬೆಂಕಿ ಆವರಿಸಿ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು, ಬಟ್ಟೆಗಳು ಬೆಂಕಿಗೆ ಆಹುತಿಯಾಗಿದ್ದವು. ಅದೃಷ್ಟವಶಾತ್ ಸಿಲಿಂಡರ್ ಸ್ಫೋಟಗೊಂಡಿಲ್ಲ. ಯಾವುದೇ ಪ್ರಾಣಾಪಾಯವಾಗಿಲ್ಲ. ಯಳಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಮುಂದಿನ ಕ್ರಮ ವಹಿಸಲಾಗಿದೆ.

 

Leave a Reply

Your email address will not be published. Required fields are marked *