More

    ಹಾನಿ ವರದಿ ಕೂಡಲೇ ಸಲ್ಲಿಸಿ

    ನಿಪ್ಪಾಣಿ: ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸೋಮವಾರ ರಾತ್ರಿ ಭಾರಿ ಗಾಳಿ, ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಓರ್ವ ವ್ಯಕ್ತಿಗೆ ಮನೆಯ ಮೇಲಿನ ಪತ್ರಾಸ್ ಕಾಲ ಮೇಲೆ ಬಿದ್ದ ಪರಿಣಾಮ ಗಾಯವಾಗಿದೆ. ಇನ್ನೊಂದೆಡೆ ಎಮ್ಮೆ ಗಂಭಿರ ಗಾಯಗೊಂಡಿದೆ.

    ಸ್ಥಳೀಯ ವಿದ್ಯಾಮಂದಿರ ಪ್ರೌಢಶಾಲೆಯ ಮೇಲಿನ ಬೃಹತ್ ಆಕಾರದ ಶೆಡ್ ಗಾಳಿ-ಮಳೆಗೆ ಹಾರಿ ಪಕ್ಕದ ಮನೆಗಳು ಹಾಗೂ ವಾಹನಗಳ ಮೇಲೆ ಬಿದ್ದಿದ್ದು, ವಾಹನಗಳು ಜಖಂಗೊಂಡಿವೆ. ವಿದ್ಯುತ್ ಕಂಬವೂ ನೆಲಕ್ಕುರುಳಿವೆ. ನಗರದ ಸಿಟಿ ಮುನ್ಸಿಪಲ್ ಕೌನ್ಸಿಲ್ ಆಂಗ್ಲ ಮಾಧ್ಯಮ ಶಾಲೆಯ ಪತ್ರಾಸ್ ಹಾರಿ ಹೋಗಿವೆ. ಅಮಲಝರಿ ಗ್ರಾಮದಲ್ಲಿ ಪತ್ರಾಸ್ ಹಾರಿ ಎಮ್ಮೆ ಮೇಲೆ ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದೆ. ಮಂಗಳವಾರ ರಸ್ತೆಗುರುಳಿದ ಮರ, ವಿದ್ಯುತ್ ಕಂಬಗಳ ದುರುಸ್ತಿ ಕಾರ್ಯ ಜೋರಾಗಿ ನಡೆದಿದೆ.

    ಶಾಸಕಿ ಶಶಿಕಲಾ ಜೊಲ್ಲೆ ಪರಿಶೀಲನೆ: ಮಂಗಳವಾರ ಬೆಳಗ್ಗೆ ಶಾಸಕಿ ಶಶಿಕಲಾ ಜೊಲ್ಲೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾನಿ ಕುರಿತು ಕೂಡಲೇ ವರದಿ ಸಲ್ಲಿಸುವಂತೆ ತಾಲೂಕಾಡಳಿತಕ್ಕೆ ಸೂಚಿಸಿದ್ದು, ಹಾನಿಗೊಳಗಾದವರಿಗೆ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ. ತಹಸೀಲ್ದಾರ್ ಎಂ.ಎನ್.ಬಳಿಗಾರ, ನಗರಸಭೆ ಪೌರಾಯುಕ್ತ ಜಗದೀಶ ಹುಲಗೆಜ್ಜಿ, ತಾಪಂ ಇಒ ಸುನೀಲ ಮದ್ದಿನ, ಹೆಸ್ಕಾಂ ಇಂಜಿನಿಯರ್ ಅಕ್ಷಯ ಚೌಗುಲೆ, ನಗರಸಭೆ ಮಾಜಿ ಅಧ್ಯಕ್ಷ ಜಯವಂತ ಭಾಟಲೆ, ವಿಲಾಸ ಗಾಡಿವಡ್ಡರ, ಮಾಜಿ ಉಪಾಧ್ಯಕ್ಷ ಸುನೀಲ ಪಾಟೀಲ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts