ನಾಗದೇವರ ಮೂರ್ತಿ ಧ್ವಂಸಗೊಳಿಸಿದ ಕಿಡಿಗೇಡಿಗಳು!; 30 ವರ್ಷಗಳಿಂದ ಪೂಜೆ ನಡೆಯುತ್ತಿದ್ದ ಸ್ಥಳದಲ್ಲಿ ನಡೆದ ಕೃತ್ಯ

Naga
Published on

ಬೆಂಗಳೂರು: ದೇವರು-ದೇವಸ್ಥಾನಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಕಿಡಿಗೇಡಿತನಕ್ಕೆ ಈಗ ಇನ್ನೊಂದು ಪ್ರಕರಣ ಸೇರಿಕೊಂಡಿದೆ. ನಾಗದೇವರ ಮೂರ್ತಿಯೊಂದನ್ನು ಕಿಡಿಗೇಡಿಗಳು ಧ್ವಂಸಗೊಳಿಸಿ, ಹಿಂದೂಗಳ ಭಾವನೆಗಳ ಧಕ್ಕೆ ತಂದಿದ್ದಾರೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಚಿಕ್ಕತೋಗೂರು ಗೇಟ್ ಬಳಿ ಈ ಪ್ರಕರಣ ನಡೆದಿದೆ. ಹೊಸೂರು ಬೆಂಗಳೂರು ಮುಖ್ಯರಸ್ತೆಯ ಚಿಕ್ಕತೋಗೂರಿನ ರಸ್ತೆಪಕ್ಕದ ನಾಗದೇವರ ಬನದಲ್ಲಿನ ಮೂರ್ತಿಯನ್ನು ಕಿಡಿಗೇಡಿಗಳು ನಿನ್ನೆ ರಾತ್ರಿ ವಿರೂಪಗೊಳಿಸಿದ್ದಾರೆ.

ಸುಮಾರು 30 ವರ್ಷಗಳಿಂದ ಇಲ್ಲಿ ಪೂಜೆ ಪುನಸ್ಕಾರ ನಡೆಯುತ್ತಿದೆ. ಪ್ರತಿದಿನವೂ ಪೂಜೆ ನಡೆಯುವ ಈ ಜಾಗದಲ್ಲಿ ನಿನ್ನೆ ಕಿಡಿಗೇಡಿಗಳು ಕಲ್ಲಿನಿಂದ ಹೊಡೆದು ದೇವರ ಮೂರ್ತಿಯನ್ನು ಒಡೆದು ಹಾಕಿದ್ದಾರೆ. ದೇವರ ಮೂರ್ತಿಯನ್ನು ವಿರೂಪಗೊಳಿಸಿದ್ದಕ್ಕೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಿಡಿಕಾರಿದ್ದಾರೆ. ಸ್ಥಳಕ್ಕೆ ಬಜರಂಗದಳ ಹಾಗೂ ಹಿಂದೂ ಪರ ಹೋರಾಟಗಾರರು ಭೇಟಿ ನೀಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸರೂ ಸ್ಥಳಕ್ಕೆ ಧಾವಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net