ಸೆ.18ಕ್ಕೆ ದಮಯಂತಿ ಟೀಸರ್

ಬೆಂಗಳೂರು: ನಟಿ ರಾಧಿಕಾ ಕುಮಾರಸ್ವಾಮಿ ಬೆಳ್ಳಿತೆರೆ ಮೇಲೆ ಕಾಣಿಸಿಕೊಳ್ಳದೆ ತುಂಬ ದಿನಗಳಾಗಿವೆ. ಹಾಗಂತ ಅವರು ಚಿತ್ರರಂಗದಿಂದ ದೂರ ಉಳಿದಿಲ್ಲ. ‘ಭೈರಾದೇವಿ’, ‘ದಮಯಂತಿ’ ಮುಂತಾದ ಸಿನಿಮಾ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದರು. ಕೆಲವು ದಿನಗಳ ಹಿಂದೆ ‘ಬೈರಾದೇವಿ’ ಶೂಟಿಂಗ್ ವೇಳೆ ರಾಧಿಕಾಗೆ ತೀವ್ರ ಗಾಯವಾಗಿತ್ತು. ಆ ವಿಷಯ ಕೇಳಿ ಅಭಿಮಾನಿಗಳು ಬೇಸರಗೊಂಡಿದ್ದರು. ಆದರೆ ಈಗ ರಾಧಿಕಾ ಕಡೆಯಿಂದ ಒಂದು ಸಿಹಿ ಸುದ್ದಿ ಸಿಕ್ಕಿದೆ. ಚಿಕ್ಕದೊಂದು ಟೀಸರ್ ಮೂಲಕ ‘ದಮಯಂತಿ’ ಚಿತ್ರದ ಝುಲಕ್ ತೋರಿಸಲು ನಿರ್ದೇಶಕ ನವರಸನ್ ಸಜ್ಜಾಗಿದ್ದಾರೆ. ಸೆಪ್ಟೆಂಬರ್ 18ರಂದು ಬಿಡುಗಡೆಯಾಗುತ್ತಿದೆ. ಶ್ರೀಲಕ್ಷ್ಮೀ ವೃಷಾದ್ರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನವರಸನ್ ಅವರು ನಿರ್ವಿುಸಿರುವ ‘ದಮಯಂತಿ’ ಕನ್ನಡ ಮಾತ್ರವಲ್ಲದೆ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆ ಕಾಣಲಿದೆ. ಹಾರರ್, ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಸಿನಿಮಾ ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದೆ. ಬೆಂಗಳೂರು, ಮೈಸೂರು, ಹೈದರಾಬಾದ್ ಮುಂತಾದ ಕಡೆ 67 ದಿನಗಳ ಚಿತ್ರೀಕರಣ ನಡೆದಿದೆ. ಆರ್.ಎಸ್. ಮಹೇಶ್ ರೆಡ್ಡಿ ಸಂಕಲನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನವಿರುವ ‘ದಮಯಂತಿ’ಯಲ್ಲಿ ಭಜರಂಗಿ ಲೋಕಿ, ಸಾಧುಕೋಕಿಲ, ತಬಲನಾಣಿ, ಮಿತ್ರ, ನವೀನ್ ಕೃಷ್ಣ, ರವಿಗೌಡ, ವೀಣಾಸುಂದರ್, ಕೆಂಪೇಗೌಡ ಮುಂತಾದವರು ಬಣ್ಣ ಹಚ್ಚಿದ್ದಾರೆ. ಬಿಡುಗಡೆ ದಿನಾಂಕ ಇನ್ನಷ್ಟೇ ಅಧಿಕೃತವಾಗಬೇಕಿದೆ.

Leave a Reply

Your email address will not be published. Required fields are marked *