22.5 C
Bengaluru
Sunday, January 19, 2020

ಚಿಂಚಲಿ: ಅಪಾಯದಲ್ಲಿ ಅಂಗನವಾಡಿ ಕಟ್ಟಡ

Latest News

ಶೇ.95ರಷ್ಟು ಮಕ್ಕಳಿಗೆ ಲಸಿಕೆ

ಮೈಸೂರು: ಮಕ್ಕಳನ್ನು ಮಾರಕ ಪೊಲೀಯೋ ಕಾಯಿಲೆಯಿಂದ ದೂರವಿಡಲು ಜಿಲ್ಲೆಯಲ್ಲಿ ಭಾನುವಾರ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಜಿಲ್ಲೆಯನ್ನು ಪೊಲೀಯೋ ಮುಕ್ತಗೊಳಿಸಲು ಪಣತೊಟ್ಟಿರುವ ಆರೋಗ್ಯ...

ಎಂ.ಎಸ್​. ಧೋನಿ ಹಿಂದಿಕ್ಕಿದ ವಿರಾಟ್​ ಕೊಹ್ಲಿ: ಕೊಹ್ಲಿಗೆ ಸರಿಸಮಾನಾಗಿ ನಿಂತ ರೋಹಿತ್​ ಶರ್ಮ!

ಬೆಂಗಳೂರು: ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಏಕದಿನ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ ಗೆಲುವು...

ಕುಸಿದು ಬಿದ್ದ ಕಾಲುವೆ ಸಂಪರ್ಕ ಸೇತುವೆ ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ಸರೂರ, ಕವಡಿಮಟ್ಟಿ, ನೆರಬೆಂಚಿ ಗ್ರಾಮದ ಭಾಗದಲ್ಲಿ ಹಾಯ್ದು ಹೋಗಿರುವ ಕಾಲುವೆ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಕೂಡಲೇ ದುರಸ್ತಿಗೆ ಅಧಿಕಾರಿಗಳು ಕ್ರಮ...

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

|ಸುನೀಲ ಮಾಂಜರಿ ಚಿಂಚಲಿ

ಇತ್ತೀಚೆಗೆ ಸುರಿದ ಮಹಾಮಳೆ ಹಾಗೂ ಕೃಷ್ಣಾ ನದಿ ನೆರೆ ಜನರ ಜೀವನ ಮಾತ್ರವಲ್ಲದೆ ಮಕ್ಕಳ ಶಿಕ್ಷಣದ ಮೇಲೂ ಭಾರಿ ಪ್ರಭಾವ ಬೀರಿದೆ. ಮಹಾಮಳೆಯ ರುದ್ರನರ್ತನಕ್ಕೆ ಗ್ರಾಮದಲ್ಲಿದ್ದ ಅನೇಕ ಅಂಗನವಾಡಿ ಕೇಂದ್ರಗಳು ಜಲಾವೃತಗೊಂಡು ಕುಸಿದಿವೆ. ಇನ್ನೂ ಕೆಲ ಅಂಗನವಾಡಿ ಕೇಂದ್ರಗಳು ಈಗಲೋ, ಆಗಲೋ ಬೀಳುವ ಹಂತದಲ್ಲಿದ್ದು ಅಪಾಯದ ಮುನ್ಸೂಚನೆ ನೀಡುತ್ತಿವೆ.

ಪ್ರವಾಹದಲ್ಲಿ ಜಲಾವೃತಗೊಂಡ 4 ಕಟ್ಟಡಗಳ ಪೈಕಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂ. 6ರ ಕೇಂದ್ರ ಸಂಖ್ಯೆ 5 ಮತ್ತು ವಾರ್ಡ್ ನಂ. 9ರ ಕೇಂದ್ರ ಸಂಖ್ಯೆ 3ರಲ್ಲಿರುವ ಅಂಗನವಾಡಿ ಕೇಂದ್ರಗಳ ಕಟ್ಟಡಗಳು ನೆಲಕಚ್ಚಿವೆ. ಉಳಿದೆರಡು ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ.

ತೋಟಪಟ್ಟಿ ಸೇರಿ ಒಟ್ಟು 19 ಅಂಗನವಾಡಿ ಕೇಂದ್ರಗಳು ಪಟ್ಟಣದಲ್ಲಿವೆ. ಇವುಗಳ ಪೈಕಿ 9 ಕಟ್ಟಡಗಳು ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಸುಪರ್ದಿಯಲ್ಲಿದ್ದರೆ. 10 ಕೇಂದ್ರಗಳು ಪಪಂ ಸೇರಿದ ಕಟ್ಟಡಗಳಲ್ಲಿ ಹಾಗೂ ಕೆಲವು ಖಾಸಗಿ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಒಟ್ಟು 19 ಕಟ್ಟಡಗಳ ಪೈಕಿ 5 ಕಟ್ಟಡಗಳು ಮಾತ್ರ ಸುಸ್ಥಿತಿಯಲ್ಲಿವೆ. ಕೆಲ ಕೇಂದ್ರಗಳ ಛಾವಣಿ ಹಂಚುಗಳು ಒಡೆದ ಕಾರಣ ಮಳೆಗಾಲದಲ್ಲಿ ಸೋರುತ್ತವೆ. ಸಿಬ್ಬಂದಿ, ಅಕಾರಿಗಳ ನಿರ್ಲಕ್ಷದಿಂದ ಈ ಕಟ್ಟಡಗಳು ಇನ್ನೂ ದುರಸ್ತಿ ಭಾಗ್ಯ ಕಂಡಿಲ್ಲ.

ಭಯದಲ್ಲಿಯೇ ಅಂಗನವಾಡಿ ಕೇಂದ್ರಕ್ಕೆ ಆಗಮಿಸುವ ಸಾರ್ವಜನಿಕರು: ಮಕ್ಕಳಿಗೆ ಶಿಕ್ಷಣ ನೀಡುವುದರ ಜತೆಗೆ ಅಂಗನವಾಡಿ ಕೇಂದ್ರಗಳ ಮೂಲಕ ಸರ್ಕಾರ ಬಾಣಂತಿ, ಗರ್ಭೀಣಿಯರಿಗೆ ಆರೋಗ್ಯ, ಮಕ್ಕಳಿಗೆ ಚುಚ್ಚುಮದ್ದು ಸೇರಿ ಅನೇಕ ಸೇವೆಗಳನ್ನು ನೀಡುತ್ತದೆ. ಆದರೆ, ಈ ಕಟ್ಟಡಗಳು ದುರಸ್ತಿಯಲ್ಲಿರುವ ಕಾರಣ ಇಲ್ಲಿಗೆ ಬರಲು ಸಾರ್ವಜನಿಕರು ಭಯಪಡುತ್ತಾರೆ. ಇನ್ನಾದರೂ ಸಂಬಂಧಪಟ್ಟ ಇಲಾಖೆ ಅಕಾರಿಗಳು ಕ್ರಮಕ್ಕೆ ಮುಂದಾಗಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಒಂದೇ ಕೊಠಡಿಯಲ್ಲಿ ಶಿಕ್ಷಣ, ಊಟ

ಕೆಲ ಅಂಗನವಾಡಿ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಆಹಾರ ತಯಾರಿಸಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಇಲ್ಲದ ಕಾರಣ ಒಂದೇ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ಹೇಳಿಕೊಡಲಾಗುತ್ತಿದ್ದು, ಅಲ್ಲಿಯೇ ಮಕ್ಕಳಿಗೆ ತಯಾರಿಸಿ ವಿದ್ಯಾರ್ಥಿಗಳಿಗೆ ನೀಡ ಲಾಗುತ್ತದೆ. ಕೆಲ ಅಂಗನವಾಡಿ ಕೇಂದ್ರಗಳು ಶೌಚಗೃಹಗಳು ಸೂಕ್ತ ನಿರ್ವಹಣೆಯ ಕೊರತೆಯಿಂದಾಗಿ ಇದ್ದೂ ಇಲ್ಲ ದಂತಾಗಿವೆ. ಇದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಪಾಲಕರನ್ನು ಕಾಡುತ್ತಿದೆ. ಅಕಾರಿಗಳು ಈ ಬಗ್ಗೆ ಗಮನಹರಿಸಬೇಕು.

ಜಲಾವೃತಗೊಂಡ ಮತ್ತು ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿ ಶಾಲೆ ಪ್ರಾರಂಭಿಸಲಾಗಿದೆ. ನೆರೆಹಾವಳಿಗೆ ತುತ್ತಾದ ಕಟ್ಟಡಗಳ ಕುರಿತು ಹಿರಿಯ ಅಕಾರಿಗಳಿಗೆ ವರದಿ ಸಲ್ಲಿಸಲಾಗಿದೆ.
| ಎಸ್.ಆರ್.ಪಾಟೀಲ ವಲಯ ಮೇಲ್ವಿಚಾರಕಿ ಚಿಂಚಲಿ

ಅಂಗನವಾಡಿ ಕೇಂದ್ರ ದುರಸ್ತಿ ಸಂಬಂಧ ಅಕಾರಿಗಳಿಂದ ವರದಿ ಪಡೆದು ಹಿರಿಯ ಅಕಾರಿಗಳಿಗೆ ಕಳುಹಿಸಲಾಗಿದೆ.
|ಶೈಲಾ ಕುರಾಣೆ ಸಿಡಿಪಿಒ

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...