More

    ಕಲ್ಲರ್ಪೆಯಲ್ಲಿ ಅಪಾಯಕಾರಿ ತಿರುವು ತೆರವು

    ಪುತ್ತೂರು ಗ್ರಾಮಾಂತರ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಆರ್ಯಾಪು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲರ್ಪೆಯಲ್ಲಿ ಅಪಾಯಕಾರಿ ತಿರುವು ಭಾಗದ ಧರೆ ತೆರವುಗೊಳಿಸುವಂತೆ ಶಾಸಕ ಅಶೋಕ್‌ಕುಮಾರ್ ರೈ ಅವರು ಶನಿವಾರ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಪ್ರಸಾದ್ ಅವರಿಗೆ ಸೂಚನೆ ನೀಡಿದರು.

    ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲರ್ಪೆಯ ಅಪಾಯಕಾರಿ ತಿರುವು ಭಾಗದಲ್ಲಿ ಅನೇಕ ಅಪಘಾತಗಳು ನಡೆದಿದ್ದು ಮೂವರು ಮೃತಪಟ್ಟ ಘಟನೆಯೂ ನಡೆದಿತ್ತು. ಇಲ್ಲಿರುವ ಅಪಾಯಕಾರಿ ಧರೆಯನ್ನು ತೆರವು ಮಾಡಿ ಎದುರಿನಿಂದ ಬರುವ ವಾಹನಗಳು ಗೋಚರಿಸುವಂತೆ ಮಾಡಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅನೇಕ ಮಂದಿ ಶಾಸಕರಿಗೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಶಾಸಕರು ಶನಿವಾರ ಸ್ಥಳ ವೀಕ್ಷಣೆ ಮಾಡಿ ಅಪಾಯಕಾರಿ ಧರೆಯನ್ನು ತೆರವು ಮಾಡುವಂತೆ ಸೂಚನೆ ನೀಡಿದರು.

    ಕಲ್ಲರ್ಪೆ ಹೆದ್ದಾರಿ ತಿರುವು ಭಾಗದ ಅಪಾಯಕಾರಿ ಧರೆಯನ್ನು ತೆರವು ಮಾಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ಮನವಿ ಮಾಡಿಕೊಂಡಿದ್ದರು. ಸ್ಥಳ ವೀಕ್ಷಣೆ ಮಾಡಿದ್ದೇನೆ. ಸುರಕ್ಷಿತ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದೇನೆ.

    – ಅಶೋಕ್‌ಕುಮಾರ್ ರೈ, ಶಾಸಕ ಪುತ್ತೂರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts