More

    ಡೆಂೆ ನಿಯಂತ್ರಣ ನಮ್ಮೆಲ್ಲರ ಹೊಣೆ ಜಾಥಾಗೆ ಚಾಲನೆ ನೀಡಿ ಡಾ.ಎಚ್. ಆರ್ ತಿಮ್ಮಯ್ಯ ಕರೆ

    ಮಂಗಳೂರು: ಮಳೆಗಾಲದಲ್ಲಿ ಡೆಂೆ ರೋಗವು ಹೆಚ್ಚಾಗಿ ಹರಡುವ ಸಾದ್ಯತೆ ಇದ್ದು, ನಮ್ಮ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವ ಮೂಲಕ ಸುತ್ತಮುತ್ತ ಸೊಳ್ಳೆಗಳ ಉತ್ಪತ್ತಿ ಆಗದಂತೆ ತಡೆಯಲು ಕ್ರಮವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ಹೇಳಿದರು.


    ಜಿಲ್ಲಾಡಳಿತ, ಜಿ.ಪಂ., ಮನಪಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ರಾಷ್ಟ್ರೀಯ ಡೆಂೆ ದಿನದ ಅಂಗವಾಗಿ ವೆನ್‌ಲಾಕ್ ಆವರಣದಲ್ಲಿ ನಡೆದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸೊಳ್ಳೆಗಳು ಉತ್ಪತ್ತಿ ಆಗದಂತೆ ಮನೆಯಲ್ಲಿ ಸಂಗ್ರಹವಾಗಿರುವ ನೀರಿನ ಮೂಲಗಳನ್ನು ಕಾಲಕಾಲಕ್ಕೆ ಸ್ವಚ್ಚಗೊಳಿಸಿ ಲಾರ್ವ ಬೆಳೆಯದಂತೆ ಕ್ರಮವಹಿಸಬೇಕು ಎಂದರು.


    ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ನವೀನ್‌ಚಂದ್ರ ಕುಲಾಲ್ ಮಾತನಾಡಿ, ನಾವು ಬಳಕೆ ಮಾಡಿ ಎಸೆದಂತಹಾ ತ್ಯಾಜ್ಯಗಳು, ತೆಂಗಿನ ಚಿಪ್ಪುಗಳು, ಪ್ಲಾಸ್ಟಿಕ್ ಬಾಟಲಿಗಳು, ಟಯರುಗಳು, ಮನೆಯ ಮೇಲಿನ ಛಾವಣಿಯಲ್ಲಿ ನಿಂತ ನೀರಿನಲ್ಲಿ ಡೆಂೆ ಹರಡಿಸುವ ಈಡೀಸ್ ಸೊಳ್ಳೆ ಉತ್ಪತ್ತಿಯಾಗುತ್ತದೆ. ಮೂಲದಲ್ಲಿಯೇ ಬರದಂತೆ ತಡೆಗಟ್ಟುವ ನಿಟ್ಟಿನಲ್ಲಿ ಡೆಂೆ ರೋಗಗಕ್ಕೆ ಕಾರಣವಾಗುವ ಈಡೀಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಮುಂಜಾಗ್ರತೆ ವಹಿಸಲು ಸಾರ್ವಜನಿಕರು ಕೈ ಜೋಡಿಸಿದರೆ ಡೆಂೆ ಮುಕ್ತ ಸಮಾಜದ ನಿರ್ಮಾಣ ಸಾಧ್ಯ ಎಂದರು.


    ಜಾಥವು ವೆನ್‌ಲಾಕ್ ಆಸ್ಪತ್ರೆಯಿಂದ ಆರಂಭಗೊಂಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯವರೆಗೆ ಸಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.


    ರಾಜ್ಯ ಸಾಂಕ್ರಾಮಿಕ ರೋಗಗಳ ಸಂಶೋಧನಾಧಿಕಾರಿ ಡಾ.ನಾಗರಾಜ್, ವೆನ್ಲಾಕ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾದ ಡಾ.ಜೆಸಿಂತಾ, ವೆನ್ಲಾಕ್ ಆಸ್ಪತ್ರೆಯ ಆರ್.ಎಂ.ಓ. ಡಾ. ಸುಧಾಕರ್, ಎಂಪಿಡಬ್ಲ್ಯು ಕಾರ್ಯಕರ್ತರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಜಾಥದಲ್ಲಿ ಭಾಗವಹಿಸಿದರು.

    See also  ಹಟ್ಟಿಚಿನ್ನದಗಣಿ ಕಂಪನಿ ಮತ್ತಷ್ಟು ಚಿನ್ನ ಉತ್ಪಾದನೆಗೆ ಮುಂದು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts