More

    ಮಹದೇವಪ್ಪಗೂ ಕತ್ತಲು ಫ್ರೀ, ಕಾಕಾ ಪಾಟೀಲ್‌ಗೂ ಕತ್ತಲು ಫ್ರೀ

    ಬೆಂಗಳೂರು: ಐದು ಗಂಟೆ ವಿದ್ಯುತ್ ಕೊಡುವವರಿಗೆ ವೋಟು ಹಾಕಬೇಕಾ? ಅಥವಾ 24 ಗಂಟೆ ವಿದ್ಯುತ್ ಕೊಡುವವರಿಗೆ ವೋಟು ಹಾಕಬೇಕಾ? ಎನ್ನುವುದನ್ನು ತೆಲಂಗಾಣದ ಜನರೇ ತೀರ್ಮಾನ ಮಾಡುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಕುಟುಕಿದರು.

    ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಡೂಪ್ಲಿಕೇಟ್ ಸಿಎಂ (ಡಿಸಿಎಂ) ತೆಲಂಗಾಣದಲ್ಲಿ ದಿನಕ್ಕೆ 5 ಗಂಟೆ ಉಚಿತ ವಿದ್ಯುತ್ ಕೊಡುತ್ತೇವೆ ಎಂದು ಹೇಳಿದ್ದಾರೆ. ಅವರಿಗೆ ಗೊತ್ತಿಲ್ಲದ ವಿಷಯ ಎಂದರೆ, ಕೆಸಿಆರ್ ಅವರು ಈಗಾಗಲೇ ಅಲ್ಲಿ ದಿನಕ್ಕೆ 24 ಗಂಟೆಯೂ ಉಚಿತ ವಿದ್ಯುತ್ ಕೊಡುತ್ತಿದ್ದಾರೆ ಎಂಬುದೇ ಅವರಿಗೆ ಗೊತ್ತಿಲ್ಲ ಎಂದು ಲೇವಡಿ ಮಾಡಿದರು.

    ರಾಜ್ಯದ ನಾಯಕರು ತೆಲಂಗಾಣದಲ್ಲಿ 200 ಯುನಿಟ್ ಬಗ್ಗೆ ಭಾಷಣ ಬಿಗಿಯುತ್ತಿದ್ದಾರೆ. ಆದರೆ, ಕರ್ನಾಟಕದ ಪರಿಸ್ಥಿತಿ ಏನಿದೆ ಎನ್ನುವುದ ಐದೂ ರಾಜ್ಯಗಳ ಜನರಿಗೆ ಹೇಳಬೇಕಿದೆ. ಕರ್ನಾಟಕ ಈಗ ಕಗ್ಗತ್ತಲ ಕರ್ನಾಟಕ ಆಗಿದೆ. ಐದು ತಿಂಗಳಲ್ಲಿ ರಾಜ್ಯ ಕಗ್ಗತ್ತಲಲ್ಲಿದೆ. ಮೊದಲು ಮಹಾದೇವಪ್ಪ ನಿಂಗೂ ಫ್ರೀ, ನಂಗೂ ಫ್ರೀ.., ಕಾಕಾ ಪಾಟೀಲ್ ನಿಂಗೂ ಫ್ರೀ ಎಂದು ಭಾಷಣ ಮಾಡಿದ್ದರು. ಈಗ ನೋಡಿದರೆ ಮಹಾದೇವಪ್ಪ ನಿಂಗೂ ಕತ್ತಲು ಫ್ರೀ, ನಂಗೂ ಕತ್ತಲು ಫ್ರೀ.., ಕಾಕಾ ಪಾಟೀಲ್ ನಿಂಗೂ ಕತ್ತಲು ಫ್ರೀ ಎನ್ನುವಂಥ ದುಸ್ಥಿತಿ ಸೃಷ್ಟಿ ಆಗಿದೆ ಎಂದು ತರಾಟೆಗೆ ತೆಗೆದುಕೊಂಡರು.

    24 ಗಂಟೆ ಉಚಿತ ಕರೆಂಟ್ ಪಡೆಯುವ ತೆಲಂಗಾಣದ ಜನರಿಗೆ 5 ಗಂಟೆ ವಿದ್ಯುತ್ ಕೊಡುತ್ತೇವೆ ಎಂದು ನಮ್ಮ ಡುಪ್ಲಿಕೇಟ್ ಸಿಎಂ ಹೇಳಿದ್ದಾರೆ. ಈಗ ತೆಲಂಗಾಣದ ಜನರು, ನಮಗೆ ಫ್ರೀ ಕರೆಂಟ್ ಬೇಕಾ? ಅಥವಾ ಕಾಂಗ್ರೆಸ್ ಬೇಕಾ? ಎಂಬುದನ್ನು ನಿರ್ಧಾರ ಮಾಡಬೇಕು. ಅವರು ಕರೆಂಟ್ ಕೊಡುವ ಪಕ್ಷಕ್ಕೆ ಮತ ಹಾಕುತ್ತಾರೆ ಎನ್ನುವುದು ನನಗೆ ಗೊತ್ತಿದೆ ಎಂದು ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಕುಮಾರಸ್ವಾಮಿ ಕುಟುಕಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts