More

  ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಸಂಜನಾಗೆ ಶಾಕ್‌, ರಕ್ಷಿತಾ ಹಾರ್ಟ್‌ಬ್ರೇಕ್

  ಬೆಂಗಳೂರು: ರೇಣುಕಾಸ್ವಾಮಿ ಕಿಡ್ನ್ಯಾಪ್ ಹಾಗೂ ಕೊಲೆ ಪ್ರಕರಣದಲ್ಲಿ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ.  ಈ ಕುರಿತಾಗಿ ಸ್ಯಾಂಡಲ್‌ವುಡ್‌ನ ಸೆಲೆಬ್ರೆಟಗಳು ಬೇಸರ ವ್ಯಕ್ತಪಡಿಸಿದ್ದಾರೆ.

  Darshan

  ದರ್ಶನ್‌ ಅವರನ್ನು ಪೊಲೀಸರು ಬಂಧಿಸುತ್ತಲೇ ಸಂಜನಾ ಗಲ್ರಾನಿ ಅವರು ವಿಡಿಯೊ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ. “ನಟ ದರ್ಶನ್‌ ಅವರ ಬಂಧನದಿಂದ ನನಗೆ ಶಾಕ್‌ ಆಗಿದೆ. ಇದು ಬಂಧನ ಆಗಿರದೆ, ಕೇವಲ ವಿಚಾರಣೆ ಆಗಿರಲಿ. ಕೂಡಲೇ ದರ್ಶನ್‌ ಅವರು ಸಂಕಷ್ಟದಿಂದ ಪಾರಾಗಲಿ ಎಂದು ದೇವರಲ್ಲಿ ಪೂಜೆ, ಪ್ರಾರ್ಥನೆ ಮಾಡುತ್ತೇನೆ” ಎಂಬುದಾಗಿ ಸಂಜನಾ ಗಲ್ರಾಣಿ ಹೇಳಿದ್ದಾರೆ.

  ನಟಿ ರಮ್ಯಾ ಕೂಡ ಎಕ್ಸ್​ನಲ್ಲಿ ದರ್ಶನ್​ ಬಂಧನ ಪೋಸ್ಟ್ ಒಂದು ರೀಪೋಸ್ಟ್ ಮಾಡಿದ್ದಾರೆ. ರಮ್ಯಾ ಮಾಡಿರುವ ರೀಪೋಸ್ಟ್​ನಲ್ಲಿ ಕೊಲೆ ಕೇಸ್​ನಲ್ಲಿ ಅಪರಾಧಿಯಾದವರಿಗೆ ಬೇಲ್ ಸಿಗುತ್ತಾ ಎನ್ನುವ ಮಾಹಿತಿ ಇದೆ. ಭಾರತೀಯ ದಂಡ ಸಂಹಿತೆ ಪ್ರಕಾರ ಇದು ಜಾಮೀನು ರಹಿತ ಅಪರಾಧವಾಗಿದೆ. ಈ ಅಪರಾಧಕ್ಕೆ ಶಿಕ್ಷೆ ಏನಾಗಬಹುದು ಅಂದ್ರೆ ಐಪಿಸಿ ಸೆಕ್ಷನ್ 302ರ ಪ್ರಕಾರ ಜೀವಾವಧಿ ಶಿಕ್ಷೆ ಆಗೊ ಸಾಧ್ಯತೆ.  ಜೀವಾವಧಿ ಶಿಕ್ಷೆ ಅಂದ್ರೆ 7 ವರ್ಷದಿಂದ 14 ವರ್ಷ ಶಿಕ್ಷೆ ಪ್ರಮಾಣ ಇರಲಿದೆ ಎಂದು ಬರೆದಿರುವ ಪೋಸ್ಟ್ ಅನ್ನು ರಮ್ಯಾ ರೀಪೋಸ್ಟ್​ ಮಾಡಿದ್ದಾರೆ.

  ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಸಂಜನಾಗೆ ಶಾಕ್‌, ರಕ್ಷಿತಾ ಹಾರ್ಟ್‌ಬ್ರೇಕ್

  ರಕ್ಷಿತಾ ಪ್ರೇಮ್‌ ಅವರು, ಹಾರ್ಟ್‌ ಬ್ರೇಕ್‌ ಆಗಿರುವ ಎಮೋಜಿ ಪೋಸ್ಟ್‌ ಮಾಡಿದ್ದು, “ಹೇಳಲು ತುಂಬ ಇದೆ. ಆದರೆ, ಏನೂ ಹೇಳಲು ಆಗುತ್ತಿಲ್ಲ” ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

  ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಜೂನ್‌ 9ರ ಭಾನುವಾರ ರಾಜಕಾಲುವೆ ಬಳಿ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

  ನಟ ದರ್ಶನ್‌, ಗೆಳತಿ ಪವಿತ್ರಾ ಗೌಡ, ಅಭಿಮಾನಿಗಳ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷ ರಾಘವೇಂದ್ರ ಅಲಿಯಾ ರಘು ದರ್ಶನ್‌ ಸೇರಿ 13 ಜನರನ್ನು ಬಂಧಿಸಿರುವ ಪೊಲೀಸರು ಇಂದು ಸಂಜೆಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts