ದರ್ಶನ್​ ಅರೆಸ್ಟ್​ ಇತ್ತ ಇನ್​ಸ್ಟಾದಲ್ಲಿ ಪತಿಯನ್ನು ಅನ್​ಫಾಲೋ ಮಾಡಿ ಡಿಪಿ ಡಿಲೀಟ್‌ ಮಾಡಿದ ವಿಜಯಲಕ್ಷ್ಮಿ!

vijayalakshmi darshan
Published on

ಬೆಂಗಳೂರು:  ರೇಣುಕಾ ಸ್ವಾಮಿ ಎನ್ನುವ ವ್ಯಕ್ತಿಯೊರ್ವನ  ಹತ್ಯೆ ಮಾಡಿದ ಆರೋಪ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಮೇಲಿದೆ. ಸದ್ಯ ಅವರನ್ನು 6 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್​ ಠಾಣೆಯಲ್ಲಿ ದರ್ಶನ್  ಹಾಗೂ ಅವರ ಸಹಚರರು ಇದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ  ಪತಿ ಅರೆಸ್ಟ್​ ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ಇನ್​ಸ್ಟಾಗ್ರಾಮ್​ ಪ್ರೊಫೈಲ್‌​ ಫೋಟೋ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನು ಅನ್​ಫಾಲೋ ಮಾಡಿದ್ದಾರೆ.

ಪವಿತ್ರಾ ಗೌಡ ವಿಚಾರದಲ್ಲಿ ಆಗಾಗ ಸೋಶಿಯಲ್ ಮೀಡಿಯಾಗಳ ಮೂಲಕ ಯುದ್ಧ ಸಾರುತ್ತಿದ್ದ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.  ದರ್ಶನ್​ ಕೊಲೆ ಆರೋಪದಲ್ಲಿ ಸಿಕ್ಕಿ ಹಾಕಿಕೊಂಡಿರುವುದ ಪವಿತ್ರಾ ಅವರ ವಿಚಾರದಲ್ಲಿ. ಹೀಗಾಗಿ ಅವರಿಗೆ ಸಹಜವಾಗಿಯೇ ಅಸಮಾಧಾನ ಉಂಟಾಗಿರುತ್ತದೆ. 

ಇನ್​ಸ್ಟಾಗ್ರಾಮ್​ನಲ್ಲಿ ದರ್ಶನ್ ಸೇರಿ ಎಲ್ಲರನ್ನೂ ವಿಜಯಲಕ್ಷ್ಮಿ ಅನ್​ಫಾಲೋ ಮಾಡಿದ್ದಾರೆ. ಈ ಮೊದಲು ಅವರು ದರ್ಶನ್​ನ ಫಾಲೋ ಮಾಡುತ್ತಿದ್ದರು. ಇನ್ನು, ಇನ್​ಸ್ಟಾಗ್ರಾಮ್ ಡಿಪಿಯನ್ನು ಕೂಡ ತೆಗೆದು ಹಾಕಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net