ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್​ ನೀಡಿದ ಮೊದಲ ಪ್ರತಿಕ್ರಿಯೆ ಹೀಗಿದೆ ನೋಡಿ…

Untitled design (91)
Published on

ಬೆಂಗಳೂರು: ಸ್ಯಾಂಡಲ್​ವುಡ್​ ಸ್ಟಾರ್​ ನಟ ದರ್ಶನ್​ ಕೊಲೆ ಪ್ರಕರಣವೊಂದರಲ್ಲಿ ಇದೀಗ ಪೊಲೀಸರ ಅತಿಥಿಯಾಗಿದ್ದು, ನಟಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ರೇಣುಕಾಸ್ವಾಮಿಯ ಕೊಲೆಯಲ್ಲಿ ದರ್ಶನ್​ ಕೈವಾಡವಿದೆ ಎಂಬ ಆರೋಪ ಕೇಳಿಬಂದಿದೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳಲ್ಲಿ ಒಬ್ಬರು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ದರ್ಶನ್​ರನ್ನು ಬಂಧಿಸಿದ್ದಾರೆ. ಇದಲ್ಲದೆ, ಒಳಸಂಚು ನಡೆಸಿದ ಆರೋಪದ ಮೇಲೆ ಪವಿತ್ರಾ ಗೌಡಳನ್ನು ಕೂಡ ವಶಕ್ಕೆ ಪಡೆಯಲಾಗಿದೆ.

ಸದ್ಯ ಅನ್ನಪೂರ್ಣೆಶ್ವರಿ ನಗರ ಪೊಲೀಸ್​ ಠಾಣೆಯಲ್ಲಿರುವ ನಟ ದರ್ಶನ್​, ಅಧಿಕಾರಿಗಳಿಗೆ ಕೊಟ್ಟ ಮೊದಲ ಪ್ರತಿಕ್ರಿಯೆ ಹೀಗಿದೆ. ನಾನು ರೇಣುಕಾಸ್ವಾಮಿ ಕೊಲೆ ಮಾಡಲು ಹೇಳಿಲ್ಲ. ಕೇವಲ ಅವರನ್ನು ಬೆದರಿಸುವಂತೆ ಮಾತ್ರ ಹೇಳಿದ್ದೆ ಅಷ್ಟೇ ಎಂದು ಹೇಳಿದ್ದಾರೆ. ದರ್ಶನ್​ ಜತೆಗೆ ಅವರ ಪ್ರೇಯಸಿ ಪವಿತ್ರಾ ಗೌಡರನ್ನು ವಶಕ್ಕೆ ಪಡೆದಿರುವ ಪೊಲೀಸರು, ಆಕೆಯನ್ನು ಕೂಡ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ಅಂತ್ಯದ ವೇಳೆಗೆ ಮತ್ತಷ್ಟು ಮಾಹಿತಿ ಹೊರಬೀಳಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net