ಬೆರಳುಗಳುನ್ನು ಮಡಚಲು ಕಷ್ಟ ಪಡುತ್ತಿರುವ ದರ್ಶನ್; ಜೈಲು ಆಸ್ಪತ್ರೆಯಲ್ಲೇ ಚಿಕಿತ್ಸೆ

Darshan
Published on

ಬೆಂಗಳೂರು: ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎನ್ನುವ ಹಿನ್ನೆಲೆಯಲ್ಲಿ ದರ್ಶನ್ ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ದರ್ಶನ್​​ ಅವರು ಪರಪ್ಪನ ಅಗ್ರಹಾರ ಸೇರಿದ್ದಾರೆ. ಜೈಲಿನಲ್ಲಿರುವ ದರ್ಶನ್​ ಅವರು ಅನಾರೋಗ್ಯದಿಂದ ಜೈಲು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಜೈಲು ಸೇರೋದಕ್ಕು ಮುಂಚೆ ಡೆವಿಲ್​ ಸಿನಿಮಾ ಶೂಟಿಂಗ್​ನಲ್ಲಿ ಕೈಮೂಳೆ ಮುರಿದು ಪಡಬಾರದ ನೋವು ಯಾತನೆ ಪಟ್ಟಿದ್ದರು. ಈ ಕುರಿತಾಗಿ ಚಿಕಿತ್ಸೆ ಕೂಡಾ ಪಡೆಯುತ್ತಿದ್ದರು.ಬ್ಯಾಂಡೆಜ್​​​ ಸುತ್ಕೊಂಡಿದ್ದ ದಾಸನಿಗೆ ಜೈಲು ಸೇರಿದ ಮೇಲೆ ಈ ನೋವು ಮತ್ತೆ ಕಾಡುತ್ತಿದೆ. ಹೀಗಾಗಿ ಆಸ್ಪತ್ರೆಯಲ್ಲೇ ಬಲಗೈಗೆ ಚಿಕಿತ್ಸೆ ಪಡೆದಿದ್ದಾರೆ.

ಜೈಲಿನಲ್ಲಿ ನೆಲದ ಮೇಲೆ ಚಾಪೆ ಹಾಕಿಕೊಂಡು ರಟ್ಟೆಯೇ ತಲೆದಿಂಬಾಗಿಸಿದ್ದ ದರ್ಶನ್​​​ಗೆ ಮಳೆಯ ಚಳಿ, ಬಿಸಿ ಮುಟ್ಟಿಸಿದೆ. ಗಾಯವಾಗಿದ್ದ ಬಲಗೈ ನೋವು ವಿಪರೀತ ಜಾಸ್ತಿ ಆಗಿದೆ. ನೋವಿನಿಂದ ಬಳಲುತ್ತಿದ್ದ ದರ್ಶನ್​ಗೆ ಚೀಫ್ ಮೆಡಿಕಲ್ ಆಫೀಸರ್ ಹರ್ಷವರ್ಧನ್ ಹಾಗೂ ಡಾಕ್ಟರ್ ನಾಗರಾಜ್​ ಚಿಕಿತ್ಸೆ ನೀಡಿದ್ದಾರೆ.ಕೈನೋವು ಹೆಚ್ಚಾಗಿರೋ ಕಾರಣ ಬೆರಳುಗಳು ಸರಿಯಾಗಿ ಮಡುಚಲು ಆಗದೇ ದರ್ಶನ್​ ಒದ್ದಾಡಿತ್ತಿದ್ದಾರೆ.

ಕೈ ಬೆರಳುಗಳು ಸರಿಯಾಗಿ ಮಡುಚಲು ಆಗದೇ ಇರುವುದರಿಂದ ಊಟ ಮಾಡಲು ಚಮಚ ನೀಡುವಂತೆ ಜೈಲು ಅಧಿಕಾರಿಗಳ ಬಳಿ ಕೋರಿದ್ದಾರೆ. ಸದ್ಯ ದರ್ಶನ್​ಗೆ ವೈದ್ಯಕೀಯ ಪರೀಕ್ಷೆ ಮಾಡಿ ರಿಪೋಟನ್ನ ವಿಚಾರಣೆ ವೇಳೆ ಹೈಕೋರ್ಟ್​ ನೀಡಬಹುದು ಎನ್ನಲಾಗ್ತಿದೆ. ಚಮಚ ಏಕೆ ನೀಡಬೇಕು ಅನ್ನೋದಕ್ಕೆ ವರದಿಯೂ ಸಿದ್ಧ ಪಡಿಸೋ ಸಾಧ್ಯತೆ ಇದೆ.

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್​ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್​ ಕೈವಾಡ ಇದೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್​ರನ್ನು ಬಂಧಿಸಲಾಗಿದೆ. ಫೆಬ್ರವರಿ 27ರಿಂದ ದರ್ಶನ್​ ಗೆಳತಿ ಪವಿತ್ರಾ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ. ರೇಣುಕ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

ಏನಿದು ಪ್ರಕರಣ?

ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net