ದೇವಸ್ಥಾನದಲ್ಲಿ ದರ್ಶನ್​ ಫೋಟೋ ಇಟ್ಟು ಪೂಜೆ! ಮಂಗಳಾರತ ಮಾಡಿದ ಅರ್ಚಕ ಅಮಾನತು

ಬೆಂಗಳೂರು: ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎನ್ನುವ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದಾರೆ ಎನ್ನಲಾದ ಪ್ರಕರಣದಲ್ಲಿ ನಟ ದರ್ಶನ್​​ ವಿಚಾರಣಧಿನ ಕೈದಿಯಾಗಿ ಜೈಲು ಸೇರಿದ್ದಾರೆ. ಇತ್ತ ಇವರ ಅಭಿಮಾನಿಗಳು ದಚ್ಚು ಮೇಲಿನ ಪ್ರೀತಿಗಾಗಿ ಟ್ಯಾಟು, ಕೈದಿನಂಬರ್ ಟ್ಯಾಟು, ಫೋಟೋಶೂಟ್​​ ಮಾಡುತ್ತಿದ್ದಾರೆ. ಆದರೆ ಇಲ್ಲೊಂದು ದೇವಸ್ಥಾನದಲ್ಲಿ ದರ್ಶನ್​​ ಅವರ ಫೋಟೋಗೆ ಪೂಜೆ ಸಲ್ಲಿಸಿದ್ದಾರೆ.

ಆರಾಧ್ಯ ದೈವ ಶ್ರೀ ದೊಡ್ಡಬಸವೇಶ್ವರ ದೇವಸ್ಥಾನದ ಗರ್ಭ ಗುಡಿಯಲ್ಲಿ ಶಿಲಾ ಮೂರ್ತಿಯ ಮುಂದೆ ಸಿನಿಮಾ ನಟ ದರ್ಶನ್​​ ಅವರ ಫೋಟೋಗಳನ್ನು ಇಟ್ಟು ಪೂಜೆ ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ದೊಡ್ಡಬಸವೇಶ್ವರ ದೇವಸ್ಥಾನದಲ್ಲಿ ಮಲ್ಲಿ ಎಂಬ ಅರ್ಚಕ ನಟ ದರ್ಶನ್ ಪೋಟೋ ಇಟ್ಟು ಪೂಜೆ ಮಾಡಿದ್ದಾರೆ. ಪೂಜೆ ಮಾಡಿ ಮಂಗಳಾರತಿ ಎತ್ತಿದ್ದಾರೆ. ಈ ಫೊಟೋಗಳು ವೈರಲ್​ ಆಗುತ್ತಿದ್ದಂತೆ ಕೆಲವರು ದೇವಸ್ಥಾನದ ಸಂಪ್ರದಾಯಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಕ್ಕೆ ಅರ್ಚಕ ಸ್ಥಾನದಿಂದ ಅಮಾನತು ಆಗಿದ್ದಾರೆ.

ಧಾರ್ಮಿಕ ದತ್ತಿ ಇಲಾಖೆ ಕಾರ್ಯ ನಿರ್ವಾಹಕ ಅಧಿಕಾರಿ ಹನುಮಂತಪ್ಪರವರು ಅರ್ಚಕನನ್ನು ಅಮಾನತು ಮಾಡಿದ್ದಾರೆ. ವಿಚಾರಣೆ ಮುಗಿಯೋವರೆಗೂ ದೇವಸ್ಥಾನಕ್ಕೆ ಬಾರದಂತೆ ನಿಷೇಧ ಹೇರಿದ್ದಾರೆ ಎನ್ನಲಾಗಿದೆ.

ಪಂಚೆ ಉಟ್ಟು ಧರ್ಮಸ್ಥಳದಲ್ಲಿ ಕಾಣಿಸಿಕೊಂಡ ನಟ ಯಶ್

Share This Article

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…

ಈ ದಿನಾಂಕದಂದು ಜನಿಸಿದವರು ದಾನದಲ್ಲಿ ಕರ್ಣನನ್ನು ಮೀರಿಸುತ್ತಾರೆ! ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಗೋಲ್ಡನ್ ಅವರ್ ರಹಸ್ಯ: ಮುಂಜಾನೆ ಬೇಗ ಏಳುವುದರಿಂದ ಇದೆ 6 ಪ್ರಯೋಜನಗಳು

 ಬೆಂಗಳೂರು: ಮನೆಯಲ್ಲಿ ಕೆಲವರು ಸೂರ್ಯೋದಯಕ್ಕೂ ಮೊದಲೇ ಏಳುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಮುಂಜಾನೆ ಬೇಗ ಏಳುವುದನ್ನು ರೂಢಿ…