More

    ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡ ಚಾಲೆಂಜಿಂಗ್​ ಸ್ಟಾರ್ – ಸಾರ್ವಜನಿಕವಾಗಿ ಲಾಂಗ್ ಹಿಡಿದು ದರ್ಶನ್ ಪೋಸ್

    Darshan pose with long hold in public

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾರ್ವಜನಿಕವಾಗಿ ಲಾಂಗ್ ಹಿಡಿಯುವ ಮೂಲಕ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಜಯನಗರದಲ್ಲಿ ಇತ್ತೀಚಿಗೆ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದರ್ಶನ್ ಲಾಂಗ್ ಹಿಡಿದುಕೊಂಡು ಫೋಟೋಗೆ ಪೋಸ್ ಕೊಟ್ಟಿದ್ದಾರೆ.

    ಇದನ್ನೂ ಓದಿ: ಒಟಿಟಿಗೆ ಬಂದೇಬಿಡ್ತು ಲಿಯೋ..ನ.24ಕ್ಕೆ ಕನ್ನಡದಲ್ಲೂ ವೀಕ್ಷಣೆಗೆ ಲಭ್ಯ
    ಸಾಮಾನ್ಯವಾಗಿ ನವೆಂಬರ್​ ಪೂರ್ತಿ ರಾಜ್ಯೋತ್ಸವ ಕಾರ್ಯಕ್ರಮಗಳು ನಡೆಯುತ್ತವೆ. ಹೀಗೆ ಮಾಡುವಾಗ ಕಾರ್ಯಕ್ರಮಗಳಿಗೆ ಚಿತ್ರನಟರು, ಪ್ರಮುಖರನ್ನು ಆಯೋಜಕರು ಕರೆದು ಸನ್ಮಾನಿಸುವುದು ವಾಡಿಕೆ. ಅದೇ ರೀತಿ ಜಯನಗರದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ನಟ ದರ್ಶನ್ ಹಾಗೂ ಅಭಿಷೇಕ್ ಅಂಬರೀಶ್ ಅವರನ್ನು ಕರೆಸಲಾಗಿತ್ತು,

    ಕಾರ್ಯಕ್ರಮದಲ್ಲಿ ದರ್ಶನ್ ಹಾಗೂ ಅಭಿಷೇಕ್ ಅವರನ್ನು ಅಭಿಮಾನಿಗಳು ಭರ್ಜರಿಯಾಗಿ ಸನ್ಮಾನಿಸಿದ್ದಾರೆ. ಈ ವೇಳೆ ದರ್ಶನ್ ಮತ್ತು ಅಭಿಗೆ ಬೆಳ್ಳಿ ಕಿರೀಟ, ಲಾಂಗ್ ಉಡುಗೊರೆ ಕೊಡಲಾಗಿದೆ. ದರ್ಶನ್ ಅಭಿಮಾನಿಗಳು ಕೊಟ್ಟ ಲಾಂಗ್ ಹಿಡಿದು ಪೋಸ್ ಕೊಟ್ಟಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

    ನಟರು ಸಾರ್ವಜನಿಕವಾಗಿ ಈ ರೀತಿ ಲಾಂಗ್ ಹಿಡಿದು ಫೋಟೋಗೆ ಪೋಸ್ ನೀಡುವುದು ಸರಿಯಲ್ಲ ಎಂದು ನೆಟ್ಟಿಗರು ಪೋಸ್ಟ್ ಮಾಡಿದ್ದಾರೆ. ಕಾಮೆಂಟ್​ಗಳನ್ನೂ ಹಾಕುತ್ತಿದ್ದಾರೆ. ಈ ಬಗ್ಗೆ ದೂರು ದಾಖಲಾಗುವ ಸಾಧ್ಯತೆಯಿದೆ.
    ಇತ್ತೀಚಿಗೆ ಮನೆಯ ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದ ಹಿನ್ನೆಲೆಯಲ್ಲಿ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು, ಇದೀಗ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಂತಾಗಿದೆ.

    300 ಕೋಟಿ ರೂ.ಬಿಗ್​ಬಡ್ಜೆಟ್​ ಸಿನಿಮಾಗೆ ಪ್ರಭಾಸ್ ಗ್ರೀನ್ ಸಿಗ್ನಲ್…

    ರಾಜ್ಯೋತ್ಸವ ರಸಪ್ರಶ್ನೆ - 20

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts