PHOTOS|ಬಂಡೀಪುರ ಅರಣ್ಯದಲ್ಲಿ ಕಾಡ್ಗಿಚ್ಚು: ಬೆಂಕಿ ನಂದಿಸಲು ಸಹಕರಿಸುವಂತೆ ನಟ ದರ್ಶನ್​ ಮನವಿ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಸಂಭವಿಸಿರುವ ಹಿನ್ನೆಲೆಯಲ್ಲಿ ಬೆಂಕಿ ನಂದಿಸಲು ಸಹಕರಿಸುವಂತೆ ನಟ ದರ್ಶನ್ ಸ್ವಯಂ ಸೇವಕರಿಗೆ ಮನವಿ ಮಾಡಿದ್ದಾರೆ.​

ಫೇಸ್​ಬುಕ್​ ಖಾತೆಯ ಮೂಲಕ ಮನವಿ ಮಾಡಿರುವ ದರ್ಶನ್​, ಬಂಡೀಪುರ ಅಭಯಾರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನ್ಯಜೀವಿ ಸಂಕುಲಕ್ಕೆ ತೊಂದರೆಯುಂಟಾಗಿದೆ. ಸರ್ಕಾರ, ಅರಣ್ಯ ಇಲಾಖೆ ಹಾಗೂ ಹಲವಾರು ಸ್ವಯಂಸೇವಕರು ಜತೆಗೂಡಿ ಈ ಅವಘಡವನ್ನು ಶಮನ ಮಾಡಲು ಯತ್ನಿಸುತ್ತಿದ್ದಾರೆ. ಆಸಕ್ತಿಯುಳ್ಳ ಸ್ವಯಂಸೇವಕರು ದಯಮಾಡಿ ಈ ಅಭಿಯಾನದಲ್ಲಿ ನೆರವಾಗಬೇಕಾಗಿ ವಿನಂತಿ ಎಂದು ಬರೆದುಕೊಂಡಿದ್ದಾರೆ.

ಅಭಯಾರಣ್ಯದ ರಾಯಭಾರಿಯಾಗಿರುವ ನಟ ದರ್ಶನ್, ಅರಣ್ಯ ಹಾಗೂ ಜೀವಸಂಕುಲಗಳ ಬಗ್ಗೆ ತುಂಬಾ ಅಭಿಮಾನ ಹೊಂದಿದ್ದಾರೆ. ಹಲವಾರು ಪ್ರಾಣಿ-ಪಕ್ಷಿಗಳನ್ನು ದತ್ತು ಪಡೆದು ಅದರ ಖರ್ಚು ವೆಚ್ಚಗಳನ್ನು ನೋಡಿಕೊಳ್ಳತ್ತಿರುವ ದರ್ಶನ್​, ಮೈಸೂರಿನ ಸಮೀಪದ ಕೆಂಪಯ್ಯನ ಹುಂಡಿ ಗ್ರಾಮದ ಬಳಿಯಿರುವ ತಮ್ಮ ಫಾರ್ಮ್​ ಹೌಸ್​ನಲ್ಲಿ ಹಲವಾರು ಪ್ರಾಣಿಗಳನ್ನು ಪೋಷಿಸುತ್ತಿದ್ದಾರೆ.

ಬಂಡೀಪುರ ಅಭಯಾರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನಜೀವಿ ಸಂಕುಲಕ್ಕೆ ತೊಂದರೆಯುಂಟಾಗಿದೆ. ಸರ್ಕಾರ, ಅರಣ್ಯ ಇಲಾಖೆ ಹಾಗೂ ಹಲವಾರು…

Darshan Thoogudeepa Srinivas ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಭಾನುವಾರ, ಫೆಬ್ರವರಿ 24, 2019

Leave a Reply

Your email address will not be published. Required fields are marked *