More

  ಇನ್ಮುಂದೆ ನಾನು… ಕಣ್ಣೀರಾಕುತ್ತಲೇ ಆಪ್ತರ ಬಳಿ ನೋವು ತೋಡಿಕೊಂಡ ದರ್ಶನ್​ ಪತ್ನಿ ವಿಜಯಲಕ್ಷ್ಮೀ!

  ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್​ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್​ ಕೈವಾಡ ಇದೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್​ರನ್ನು ಬಂಧಿಸಲಾಗಿದೆ. ಈ ಪ್ರಕರಣದಿಂದ ಇಡೀ ಚಿತ್ರರಂಗವೇ ಶಾಕ್​ಗೆ ಒಳಗಾಗಿದೆ. ಅದಕ್ಕಿಂತಲೂ ಹೆಚ್ಚಾಗಿ ದರ್ಶನ್​ ಪತ್ನಿ ವಿಜಯಲಕ್ಷ್ಮೀ ಮೇಲೆ ಈ ಪ್ರಕರಣ ತೀವ್ರ ಪರಿಣಾಮ ಬೀರಿದೆ.

  ಸ್ಟಾರ್​ ನಟನಾಗಿರುವ ತನ್ನ ಗಂಡ ಇಂತಹದ್ದೊಂದು ಕೆಟ್ಟ ಕೆಲಸ ಮಾಡಿ ಬಂಧನವಾಗುತ್ತಾರೆ ಅಂತ ವಿಜಯಲಕ್ಷ್ಮೀ ಅವರು ಕನಸು ಮನಸಲ್ಲೂ ಯೋಚಿಸಿರಲಿಲ್ಲ. ಇದೀಗ ಗಂಡ ಮಾಡಿದ್ದನ್ನು ನೆನೆದು ವಿಜಯಲಕ್ಷ್ಮೀ ಮನೆಯಲ್ಲೇ ಕಣ್ಣೀರು ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಮನೆಯಿಂದ ಹೊರಗಡೆ ಬರಲಾಗದ ಸ್ಥಿತಿ ಎದುರಾಗಿದೆ. ಆಪ್ತರ ಬಳಿ ವಿಜಯಲಕ್ಷ್ಮೀ ತಮ್ಮ ನೋವನೆಲ್ಲ ತೋಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

  ಇನ್ಮುಂದೆ ನಾನು ನನ್ನ ಮಗನಿಗಾಗಿ ಮಾತ್ರ ಬಾಳುತ್ತೇನೆ. ಇಷ್ಟು ದಿನ ಮಗನಿಗಾಗಿ ಎಲ್ಲವನ್ನು ಸಹಿಸಿಕೊಂಡು ಗಂಡನ ಜತೆ ಇದ್ದೆ. ಇನ್ಮೇಲೆ ಮಗನಿಗಾಗಿ ಮಾತ್ರ ಬದುಕು ನಡೆಸುತ್ತೇನೆ. ಅವರು ಮಾಡಿದ ಕೆಲಸದಿಂದ ಇಡೀ ಕುಟುಂಬವೇ ತಲೆತಗ್ಗಿಸುವಂತೆ ಆಗಿದೆ. ಎಲ್ಲಿಯೂ ತಲೆಯೆತ್ತಿ ಮಾತನಾಡಲು ಆಗುತ್ತಿಲ್ಲ ಎಂದು ವಿಜಯಲಕ್ಷ್ಮೀ ತಮ್ಮ ಆಪ್ತರ ಬಳಿ ಹೇಳಿಕೊಂಡು ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

  ಪವಿತ್ರಾ ಗೌಡ ವಿಚಾರಕ್ಕೆ ಈಗಾಗಲೇ ದರ್ಶನ್​ ಮತ್ತು ವಿಜಯಲಕ್ಷ್ಮೀ ನಡುವೆ ವೈಮನಸ್ಸು ಉಂಟಾಗಿತ್ತು. ಆದರೆ, ಮಗನಿಗಾಗಿ ವಿಜಯಲಕ್ಷ್ಮೀ ಎಲ್ಲವನ್ನು ಸಹಿಸಿಕೊಂಡಿದ್ದರು. ಕಳೆದ ಫೆಬ್ರವರಿಯಲ್ಲಿ ದರ್ಶನ್​ ಬರ್ತಡೇ ಸಮಯದಲ್ಲಿ ಪವಿತ್ರಾ ಗೌಡ ದರ್ಶನ್​ ಜತೆಗಿನ ತಮ್ಮ ಸಂಬಂಧವನ್ನು ಬಹಿರಂಗಪಡಿಸಿದ್ದರು. ನಮ್ಮದು 10 ವರ್ಷದ ಸಂಬಂಧ ಎಂದು ಇನ್​ಸ್ಟಾಗ್ರಾಂನಲ್ಲಿ ದರ್ಶನ್​ ಜತೆಗಿನ ಫೋಟೋಗಳನ್ನು ಹಂಚಿಕೊಂಡಿದ್ದರು. ಇದಾದ ಬಳಿಕ ವಿಜಯಲಕ್ಷ್ಮೀ ಮತ್ತು ಪವಿತ್ರಾ ಗೌಡ ಕಿತ್ತಾಡಿಕೊಂಡಿದ್ದರು. ಇದೀಗ ಪವಿತ್ರಾ ಗೌಡಳಿಂದಲೇ ದರ್ಶನ್​ಗೆ ಇಂಥಾ ಸ್ಥಿತಿ ಬಂದಿದೆ. ಇದರಿಂದ ಆಘಾತಕ್ಕೆ ಒಳಗಾಗಿರುವ ವಿಜಯಲಕ್ಷ್ಮೀ ಚಿಂತೆಯಲ್ಲಿ ಮುಳುಗಿದ್ದಾರೆ.

  See also  'ಡಿಯರ್ ಕಣ್ಮಣಿ' ಮೂಲಕ ಹೀರೋ ಆದ 'ಬಿಗ್​ ಬಾಸ್​' ಕಿಶನ್​

  ಏನಿದು ಪ್ರಕರಣ?
  ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ.

  ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

  ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.

  ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.

  ಪವಿತ್ರಾ ಗೌಡ ನಟ ದರ್ಶನ್​ ಬಾಳಲ್ಲಿ ಬಂದಿದ್ಹೇಗೆ? ಯಾವಾಗ ಪರಿಚಯವಾಯ್ತು? ಆ ಸಿನಿಮಾದಿಂದಲೇ ಶುರುವಾಯ್ತು!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts