ದರ್ಶನ್​ ಜೈಲು ಸೇರುತ್ತಿದ್ದಂತೆ ಇತ್ತ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್​! ಅತ್ತಿಗೆಗೆ ಧೈರ್ಯ ತುಂಬಿದ ಫ್ಯಾನ್ಸ್...darshan wife vijayalakshmi emotional​​

Darshan vijayalakshmi
Published on

 ಬೆಂಗಳೂರು:  ( darshan wife vijayalakshmi emotional ) ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎನ್ನುವ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿದಂತೆ 7 ಮಂದಿ ಸೇರಿ​​ ಚಿತ್ರದುರ್ಗದ ನಿವಾಸಿಯಾಗಿರುವ ರೇಣುಕಸ್ವಾಮಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣದ ಹಿನ್ನೆಲೆಯಲ್ಲಿ ದರ್ಶನ್​ ಜೈಲು  ಸೇರುತ್ತಿದ್ದಂತೆ ಪತ್ನಿ ವಿಜಯಲಕ್ಷ್ಮಿ ಇನ್​ಸ್ಟಾಗ್ರಾಮ್​​ನಲ್ಲಿ ಭಾವುಕ ಪೋಸ್ಟ್​​ ಹಾಕಿಕೊಂಡಿದ್ದಾರೆ.

ನಟ ದರ್ಶನ್​ ಜೈಲು ಸೇರುತ್ತಿದ್ದಂತೆ ಇತ್ತ ಪತ್ನಿ ವಿಜಯಲಕ್ಷ್ಮಿ ಇನ್​ಸ್ಟಾಗ್ರಾಮ್​ನಲ್ಲಿ ಭಾವುಕ ಪೋಸ್ಟ್​ ಹಾಕಿಕೊಂಡಿದ್ದಾರೆ. ಏಕಾಂಗಿಯಾಗಿ ದರ್ಶನ್​ ನಿಂತುಕೊಂಡಿದ್ದ ಫೋಟೋ ಶೇರ್ ಮಾಡಿಕೊಂಡ ಪತ್ನಿ ವಿಜಯಲಕ್ಷ್ಮಿ ಕ್ಯಾಪ್ಶನ್​​ನಲ್ಲಿ ಒಡೆದ ಹೃದಯ ಸಿಂಬಲ್ ಹಾಕಿಕೊಂಡಿದ್ದಾರೆ.

ಈ ಪೋಸ್ಟ್​​ ವೈರಲ್​​ ಆಗುತ್ತಿದ್ದೆಂತೆ ಎಂದಿನಂತೆ ದರ್ಶನ್​​ ಅಭಿಮಾನಿಗಳು ಅತ್ತಿಗೆಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.  ಕುಗ್ಗದೀರಿ, ಅತ್ತಿಗೆ ನಿಮ್ಮೊಂದಿಗೆ ಎಂದಿನಂತೆ ಅಭಿಮಾನಿಗಳ ಸಮೂಹ ಇದೆ, ನಿಮ್ಮಗಿರುವ ಒಳ್ಳೆಯ ಮನಸ್ಸಿಗೆ ಆದಷ್ಟೂ ಬೇಗ ಒಳ್ಳೆಯದಿನಗಳು ಬರಲಿವೆ ಕಾಯೋಣ,  ಒಳ್ಳೆಯತನಕ್ಕೆ ಪರೀಕ್ಷೆಗಳು ಜಾಸ್ತಿ ಅತ್ತಿಗೆ,  ಉಸಿರಿರುವವರೆಗೂ ಇರ್ತೀವಿ ನಿಮ್ ಹಿಂದೆ ಎಂದು  ಧೈರ್ಯದ ಮಾತುಗಳನ್ನಾಡಿದ್ದಾರೆ.

ಪ್ರಕರಣದ ಹಿನ್ನೆಲೆ ಏನು? :

2024ರ ಜೂನ್​ 8ರಂದು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆಯಾಗಿತ್ತು. ಈ ಹತ್ಯೆಯ ಕೇಸ್​ನಲ್ಲಿ ನಟ ದರ್ಶನ್​ ಸೇರಿದಂತೆ 17 ಮಂದಿಯನ್ನು ಬಂಧಿಸಲಾಗಿತ್ತು. ರೇಣುಕಾಸ್ವಾಮಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಜುಲೈ 24ರಂದು ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಹಾಗೂ ನ್ಯಾ.ಮಹದೇವನ್ ಅವರಿದ್ದ ದ್ವಿಸದಸ್ಯ ಪೀಠ, ಸರ್ಕಾರ ಹಾಗೂ ದರ್ಶನ ಪರ ವಕೀಲರ ವಾದವನ್ನು ಆಲಿಸಿತು. ಬಳಿಕ ಎರಡೂ ಕಡೆಯ ವಕೀಲರಿಗೆ ಲಿಖಿತ ವಾದಾಂಶವನ್ನು ಸಲ್ಲಿಸಲು ಕೋರ್ಟ್​ ಒಂದು ವಾರಗಳ ಗಡುವು ನೀಡಿದ್ದು, ಆ ಬಳಿಕ ತೀರ್ಪು ಪ್ರಕಟಿಸಲಿದೆ ಎಂದಿತ್ತು.

3 ಪುಟದೊಳಗೆ ಲಿಖಿತ ವಾದ ಸಲ್ಲಿಸಲು ನ್ಯಾಯಾಲಯ ಹೇಳಿದೆ. ಸರ್ಕಾರದ ಪರ ಸಿದ್ಧಾರ್ಥ್​ ಲೂತ್ರಾ ಹಾಗೂ ನಟ ದರ್ಶನ್​ ಪರ ಸಿದ್ಧಾರ್ಥ್​ ದವೆ ವಾದ ಮಂಡನೆ ಮಾಡಿದರು. ಸಾಕ್ಷಿಗಳು, ಪ್ರತ್ಯಕ್ಷದರ್ಶಿಗಳ ಹೇಳಿಕೆ, ದರ್ಶನ್​ ಹಾಗೂ ಪವಿತ್ರಾ ಗೌಡ ನಡುವಿನ ಸಂಬಂಧ ಹಾಗೂ ಕೊಲೆಗೆ ಕಾರಣವೇನು? ಮುಂತಾದ ವಿಚಾರಗಳ ಬಗ್ಗೆ ನ್ಯಾಯಾಲಯ ಪ್ರಶ್ನೆಗಳನ್ನು ಕೇಳಿತು. ಎರಡೂ ಕಡೆಯ ವಕೀಲರು ಪ್ರಬಲವಾಗಿ ವಾದ ಮಂಡನೆ ಮಾಡಿದ್ದು, ವಾದವನ್ನು ಆಲಿಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.

Vijayalakshmi Darshan

ಕೊಲೆ ಕೇಸ್​ನ ಆರೋಪಿಗಳಾದ ನಟ ದರ್ಶನ್​, ಪವಿತ್ರಗೌಡ, ಪ್ರದೂಶ್​, ಲಕ್ಷ್ಮಣ್​, ನಾಗರಾಜು ಹಾಗೂ ಅನುಕುಮಾರ್​ ಸೇರಿದಂತೆ 7 ಪ್ರಮುಖ ಆರೋಪಿಗಳಿಗೆ ಕಳೆದ(2024) ಡಿಸೆಂಬರ್​ 13ರಂದು ಕರ್ನಾಟಕ ಹೈಕೋರ್ಟ್​ ಜಾಮೀನು ಮಂಜೂರು ಮಾಡಿತ್ತು. ರಾಜ್ಯ ಪೊಲೀಸ್ ಇಲಾಖೆ ನಟ ದರ್ಶನ್‌ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಸುದೀರ್ಘ ವಾದ-ವಿವಾದ ಪರಿಶೀಲಿಸಿದ ನ್ಯಾಯಾಲಯ ತೀರ್ಪು ಕಾಯ್ದಿರಿಸಿತು. ಇಂದು ಈ ಪ್ರಕರಣದ ವಾದ ಆಲಿಸಿದ ಸುಪ್ರೀಂ ಕೋರ್ಟ್ ಈ ಹಿಂದೆ ಹೈ ಕೋರ್ಟ್​​ ನೀಡಿದ್ದ ಜಾಮೀನನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.

ದರ್ಶನ್​ ಸೇರಿದಂತೆ ಎಲ್ಲ 7 ಆರೋಪಿಳಿಗೆ ಹೈಕೋರ್ಟ್​ ನೀಡಿದ್ದ ಜಾಮೀನು ಆದೇಶವನ್ನು ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಹಾಗೂ ನ್ಯಾ.ಮಹದೇವನ್ ಅವರಿದ್ದ ದ್ವಿಸದಸ್ಯ ಪೀಠ ರದ್ದು ಮಾಡಿತು. ಹೈಕೋರ್ಟ್​ ನೀಡಿದ ಜಾಮೀನಿನಲ್ಲಿ ದೋಷವಿದೆ. ಜೈಲಿನಲ್ಲಿ ಆರೋಪಿಗಳಿಗೆ ಫೈವ್​ ಸ್ಟಾರ್​ ಟ್ರೀಟ್​ಮೆಂಟ್​ ನೀಡಲಾಗಿದೆ. ಈ ಪ್ರಕರಣ ಬೆಳಗಕಿಗೆ ಬಂದ ಕೂಡಲೇ ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಿತ್ತು. ಇದೊಂದು ಲ್ಯಾಂಡ್​​ ಮಾರ್ಕ್​ ತೀರ್ಪು ಎಂದು ಸುಪ್ರೀಂಕೋರ್ಟ್ ಹೇಳಿತು. ಅಲ್ಲದೆ, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ ಎಂದಿದೆ.

ಸುಪ್ರೀಂ ಕೋರ್ಟ್​ ಹೇಳಿದ್ದೇನು? :

ಆರೋಪಿ ಜೈಲಿನ ಲಾನ್​ನಲ್ಲಿ ಸಿಗರೇಟ್​ ಸೇದುವುದು ಕಂಡಬಂದರೆ ಜೈಲಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಜೈಲಿಗೆ ಹೋದ ನಂತರ ಆರೋಪಿ ಸಾಮಾನ್ಯ ಕೈದಿಯಂತೆ ಇರಬೇಕು. ಈ ಮುಂಚೆ ಆತನಿಗೆ ಫೈವ್ ಸ್ಟಾರ್ ಟ್ರೀಟ್ಮೆಂಟ್ ಕೊಡಲಾಗಿದೆ. ಇನ್ಮುಂದೆ ಸಾಮಾನ್ಯ ಕೈದಿಯಂತೆ ಇರಬೇಕು. ಜೈಲಿನ ರಾಜಾತಿಥ್ಯದ ಬಗ್ಗೆ ಕೂಡ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.

A2 ದರ್ಶನ್ ಜೊತೆ A1 ಪವಿತ್ರಾ ಗೌಡ, A6, ಜಗದೀಶ್ ಅಲಿಯಾಸ್ ಜಗ್ಗ, A7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೂಶ್, ಎ11 ನಾಗರಾಜು ಅಲಿಯಾಸ್ ನಾಗ, ಎ12 , ಲಕ್ಷ್ಮಣ್ ಜಾಮೀನು ಕೂಡ ರದ್ದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net