More

    ನಟ ದರ್ಶನ್ ಮಾಡಿದ ಮನವಿಗೆ ಮೃಗಾಲಯಗಳಿಗೆ ಹರಿದುಬಂದ ಮೊತ್ತವೆಷ್ಟು?

    ಬೆಂಗಳೂರು: ಕರೊನಾ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಸಿನಿಮಾ ಕ್ಷೇತ್ರದ ಜನರಿಗಾಗಿ ಹಲವಾರು ಸ್ಟಾರ್​ ನಟರು ಮುಂದೆ ಬಂದು ಸಹಾಯ ಮಾಡಿದ್ದಾರೆ, ಮಾಡುತ್ತಿದ್ದಾರೆ. ಅದೇ ರೀತಿ ನಟ ದರ್ಶನ್​ ಕೂಡ ಅಂಥದ್ದೊಂದು ಉದ್ದೇಶಕ್ಕಾಗಿ ಜೂ. 5ರಂದು ಮೃಗಾಲಯಗಳಲ್ಲಿನ ಪ್ರಾಣಿಗಳ ರಕ್ಷಣೆಗೆ ಮನವಿ ಮಾಡಿ, ದತ್ತು ಪಡೆಯುವಂತೆ ಕೋರಿದ್ದರು. ಅದರಂತೆ ಕೇವಲ ಅವರ ಮನವಿಯ ಹಿನ್ನೆಲೆಯಲ್ಲಿ ದೊಡ್ಡ ಬದಲಾವಣೆಯೇ ನಡೆದುಹೋಗಿದೆ. ಅಲ್ಲಿಂದ ಇಲ್ಲಿಯವರೆಗೂ 3 ಕೋಟಿ ಸನಿಹಕ್ಕೆ ಬಂದು ನಿಂತಿದೆ. 

    ಇದನ್ನೂ ಓದಿ: ನನಗಿಂತ ಚೆನ್ನಾಗಿ ನಿರ್ದೇಶನ ಮಾಡುವವರು ಇನ್ನೊಬ್ಬರು ಸಿಗುವುದಿಲ್ಲ: ಕಂಗನಾ

    ಹೌದು.. ಅರಣ್ಯ ಇಲಾಖೆಯ ರಾಯಭಾರಿಯೂ ಆಗಿರುವ ಪ್ರಾಣಿಪ್ರಿಯ ದರ್ಶನ್​ ಮೃಗಾಲಯದ ಪ್ರಾಣಿಗಳ ಪರವಾಗಿ ದನಿ ಎತ್ತಿದ್ದರು. ಕರೊನಾದ ಕಾರಣದಿಂದಾಗಿ ಮೃಗಾಲಯಕ್ಕೂ ಸಂಕಷ್ಟ ಎದುರಾಗಿದ್ದು, ಪ್ರಾಣಿಗಳ ಬದುಕಿಗೂ ಕಷ್ಟ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ ಪ್ರಾಣಿಗಳ ಕುರಿತ ಪ್ರೀತಿಯನ್ನು ವ್ಯಕ್ತಪಡಿಸಿ ನೆರವಾಗಬೇಕೆಂದು ವಿಡಿಯೋ ಮೂಲಕ ಕೋರಿಕೊಂಡಿದ್ದರು. ಹಾಗೇ ಕೋರಿದ ಬೆನ್ನಲ್ಲೇ ರಾಜ್ಯದ ಹಲವು ಮೃಗಾಲಯಗಳಲ್ಲಿನ ಪ್ರಾಣಿಗಳನ್ನು ಸಾವಿರಾರು ಮಂದಿ ದತ್ತು ಪಡೆದಿದ್ದಾರೆ. ಕೇವಲ 25 ದಿನಗಳಲ್ಲಿ 3 ಕೋಟಿ ಸನಿಹಕ್ಕೆ ಬಂದಿದೆ ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರ ತಿಳಿಸಿದೆ.

    ಇದನ್ನೂ ಓದಿ: ‘ಸಖತ್’ ನಿರ್ಮಾಪಕರಿಂದ ಹೊಸ ಸಿನಿಮಾ; ಮಾಸ್ ಕಮರ್ಷಿಯಲ್ ಚಿತ್ರದಲ್ಲಿ ನಿಖಿಲ್​ ಕುಮಾರಸ್ವಾಮಿ

    ಕರೊನಾದಿಂದಾಗಿ ಕರ್ನಾಟಕದ 9 ಮೃಗಾಲಯಗಳಿಗೂ ಸಮಸ್ಯೆ ಆಗಿರುವ ಬಗ್ಗೆ ನಟ ದರ್ಶನ ಕಳವಳ ವ್ಯಕ್ತಪಡಿಸಿದ್ದರು. ಪ್ರವಾಸಿಗರು ಬರದೇ ಇರುವುದರಿಂದ ಈ ಮೃಗಾಲಯಗಳಲ್ಲಿರುವ ಒಟ್ಟು 5 ಸಾವಿರ ಪ್ರಾಣಿಗಳಿಗೆ ಕಷ್ಟ ಎದುರಾಗಿದೆ. ಹಾಗಂತ ಎಲ್ಲರೂ ಮನೆಯಲ್ಲಿ ಪ್ರಾಣಿ ಸಾಕಲು ಆಗುವುದಿಲ್ಲ. ಆದರೆ ಈ ಪ್ರಾಣಿಗಳನ್ನು ದತ್ತು ಪಡೆಯಬಹುದು. ಅದಕ್ಕಾಗಿ ವರ್ಷಕ್ಕೊಮ್ಮೆ ಮಾತ್ರ ಹಣ ಕೊಟ್ಟರೆ ಸಾಕು. ಅಲ್ಲದೆ ಆ ಹಣಕ್ಕೆ ಆದಾಯ ತೆರಿಗೆ ವಿನಾಯಿತಿ ಕೂಡ ಸಿಗಲಿದೆ. ಸಾಧ್ಯವಿರುವ ಎಲ್ಲರೂ ಪ್ರಾಣಿಗಳನ್ನು ದತ್ತು ಪಡೆಯಬೇಕು ಎಂದು ಅವರು ಮೃಗಾಲಯದಲ್ಲಿ ಪ್ರಾಣಿಗಳ ಮುಂದೆ ನಿಂತುಕೊಂಡು ವಿಡಿಯೋ ಮಾಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts