More

  ಪರಪ್ಪನ ಅಗ್ರಹಾರದಲ್ಲಿ ದಾಸ; ಅರೆಸ್ಟ್ ಆದ 12 ದಿನದಲ್ಲಿ ಭಾರೀ ತೂಕ ಕೆಳದುಕೊಂಡ ದರ್ಶನ್

  ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್​ ಹಾಗೂ ಸಹಚರರು ಜೈಲು ಪಾಲಾಗಿದ್ದು, ಪೊಲೀಸ್​ ಕಸ್ಟಡಿ ಅಂತ್ಯವಾದ ಹಿನ್ನೆಲೆ ಕೋರ್ಟ್​ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ನಟ ದರ್ಶನ್​ ಮತ್ತು ಸಹಚರರನ್ನು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಗಿದ್ದು, ವಿಚಾರಣಧೀನ ಕೈದಿ ನಂಬರ್​ ನೀಡಲಾಗಿದೆ.

  ಜೈಲು ಅಧಿಕಾರಿಗಳು ನಟ ದರ್ಶನ್​ಗೆ  ವಿಚಾರಣಾಧೀನ ಕೈದಿ ನಂಬರ್ ಅನ್ನು ನೀಡಿದ್ದಾರೆ. ವಿಚಾರಣಾಧೀನ (UTP) ಕೈದಿ ನಂಬರ್- 6106 ಅನ್ನು ನೀಡಲಾಗಿದೆ. ಭದ್ರತೆ ದೃಷ್ಟಿಯಿಂದ ನಟ ದರ್ಶನ್​ರನ್ನು ವಿಶೇಷ ಬ್ಯಾರಕ್​ನಲ್ಲಿ ಇರಿಸಲಾಗಿದ್ದು, ಇತರೆ ಕೈದಿಗಳಿಂದ ಅಪಾಯವಿರುವ ಆರೋಪಿಗಳನ್ನು ಈ ಬ್ಯಾರಕ್​ನಲ್ಲಿ ಇಡಲಾಗುತ್ತಿದೆ. ಇದೀಗ ದರ್ಶನ್​ರನ್ನು ಮೂರನೇ ಬ್ಯಾರಕ್​ನಲ್ಲಿ ಇರಿಸಲಾಗಿದೆ.

  13 ವರ್ಷಗಳ ಬಳಿಕ ನಟ ದರ್ಶನ್​ ಮತ್ತೊಮ್ಮೆ ಜೈಲುಪಾಲಾಗಿದ್ದು, ರಾತ್ರ ಊಟಕ್ಕೆ ಮುದ್ದೆ, ಚಪಾತಿ, ಅನ್ನ ಸಾಂಬಾರ್​ ಮತ್ತು ಮಜ್ಜಿಗೆ ನೀಡಲಾಗಿತ್ತು ಎಂದು ವರದಿಯಾಗಿದೆ. ರಾತ್ರಿ ಸರಿಯಾಗಿ ಊಟ ಮಾಡದ ದರ್ಶನ್‌ ತಡವಾಗಿ ನಿದ್ರೆಗೆ ಜಾರಿದ್ದಾರೆ. ಬೆಳಗ್ಗೆ 6:30ರ ಸುಮಾರಿಗೆ ಎದ್ದ ದರ್ಶನ್​ ಸೆಲ್​ನಲ್ಲೇ ಕುಳಿತಿದ್ದಾರೆ. ಬೆಳಗಿನ ಉಪಹಾರಕ್ಕೆ ಪಲಾವ್​ ನೀಡಲಾಗಿದೆ ಎಂದು ವರದಿಯಾಗಿದೆ. ರೇಣುಕಸ್ವಾಮಿ ಹತ್ಯೆ ಕೇಸ್​ನಲ್ಲಿ ನಟ ದರ್ಶನ್​ ಬಂಧನವಾಗಿ 13 ದಿನಗಳಾಗಿದ್ದು, ಅವರ ತೂಕದಲ್ಲಿ ಇಳಿಕೆ ಕಂಡಿದ್ದಾರೆ ಮತ್ತು ಬಿಪಪಿಯಲ್ಲಿ ಏರುಪೇರಾಗಿದೆ ಎಂದು ತಿಳಿದು ಬಂದಿದೆ.

  Darshan

  ಇದನ್ನೂ ಓದಿ: ಈ ರೀತಿ ಕಮ್​ಬ್ಯಾಕ್​ ಮಾಡಲು ಅವರು ಆಡಿದ ಮಾತುಗಳೇ ಪ್ರೇರಣೆ: ಹಾರ್ದಿಕ್​ ಪಾಂಡ್ಯ

  ಸದ್ಯ ತಿಳಿದು ಬಂದಿರುವ ಮಾಹಿತಿ ಪ್ರಕಾರ ನಟ ದರ್ಶನ್​ ಅವರು ಸುಮಾರು 1 ರಿಂದ 2 ಕೆಜಿಯಷ್ಟು ತೂಕ ಇಳಿಸಿಕೊಂಡಿದ್ದು, ಬಿಪಿ ಕೂಡ ಏರುಪೇರಾಗಿದೆ ಎಂದು ತಿಳಿದು ಬಂದಿದೆ. ಶ್ರುಕವಾರದಂದು ಪರಿಶೀಲಿಸಿದಾಗ ದರ್ಶನ್​ ತೂಕದಲ್ಲಿ ಇಳಿಕೆಯಾಗಿದ್ದು, ಬಿಪಿ 130/90ರಲ್ಲಿ ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ.

  See also  ಪ್ರಚಾರಪ್ರಿಯ ನಾನಲ್ಲ ಎಂದ ಬಸವರಾಜು

  ನ್ಯಾಯಾಂಗ ಬಂಧನಕ್ಕೆ ಒಳಪಟ್ಟ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರದ ಮಹಿಳಾ ವಿಭಾಗದ ಡಿ ಬ್ಯಾರಕ್​ನಲ್ಲಿ ಇರಿಸಲಾಗಿದೆ. ಪವಿತ್ರಾಗೆ 6024 ಸಂಖ್ಯೆಯನ್ನು ನೀಡಲಾಗಿತ್ತು. ಇಂದು ಪೊಲೀಸ್​ ಕಸ್ಟಡಿ ಅಂತ್ಯವಾದ ಆರೋಪಿಗಳಿಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಜುಲೈ 4 ರವರೆಗೆ ದರ್ಶನ್ ಮತ್ತು ಗ್ಯಾಂಗ್ ಜೈಲಿನಲ್ಲಿರಲಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts