More

    ಡಿಸಿ ಕಚೇರಿ ಎದುರು ದಸಂಸ ಪ್ರತಿಭಟನೆ

    ಮೈಸೂರು: ಆನ್‌ಲೈನ್ ಶಿಕ್ಷಣ ಪದ್ಧತಿಯನ್ನು ಜಾರಿಗೊಳಿಸದಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಯಿತು.

    ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ ಪ್ರತಿಭಟನಾಕಾರರು, ಕರೊನಾ ಸೋಂಕು ಹರಡಿರುವುದರಿಂದ ದೇಶಾದ್ಯಂತ ಶಾಲಾ-ಕಾಲೇಜುಗಳನ್ನು ನಡೆಸಲು ಆಗದ ಪರಿಸ್ಥಿತಿಗೆ ನಾವು ಬಂದಿದ್ದೇವೆ. ಹೀಗಾಗಿ, ಸರ್ಕಾರ ಆಯಾ ಗ್ರಾಮ ಮತ್ತು ವಾರ್ಡ್‌ಗಳಲ್ಲಿ ನಿಗದಿತ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ ನಿಗದಿತ ವೈದ್ಯರಿಂದ ಪರೀಕ್ಷೆ ಮಾಡಿಸಲಿ. ನಂತರ ಸೋಂಕಿಲ್ಲದ ಮಕ್ಕಳಿಗೆ ಶಿಕ್ಷಣ ನೀಡಲಿ ಎಂದರು ಆಗ್ರಹಿಸಿದರು.

    ಸರ್ಕಾರ ತನ್ನ ಜವಾಬ್ದಾರಿಯನ್ನು ತಪ್ಪಿಸಿಕೊಳ್ಳುವ ಸಲುವಾಗಿ ಆನ್‌ಲೈನ್ ಮೂಲಕ ಶಿಕ್ಷಣ ನೀಡಲು ಮುಂದಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿದಿರುವ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ. ಯಾವುದೇ ಕಾರಣಕ್ಕೂ ಆನ್‌ಲೈನ್ ಶಿಕ್ಷಣವನ್ನು ಜಾರಿ ಮಾಡಬಾರದು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

    ದಸಂಸ ಜಿಲ್ಲಾಧ್ಯಕ್ಷ ಚೋರನಹಳ್ಳಿ ಶಿವಣ್ಣ, ಸಂಚಾಲಕ ಕೆ.ವಿ.ದೇವೇಂದ್ರ, ಮುಖಂಡರಾದ ಕಿರಂಗೂರು ಸ್ವಾಮಿ, ಮೂಡಳ್ಳಿ ಮಹದೇವ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts