More

    ಇಂದಿನಿಂದ ದಶಮಾನೋತ್ಸವ ಕಾರ್ಯಕ್ರಮಗಳ ಆಯೋಜನೆ: ಅನಿಕೇತನ ಸ್ಕೂಲ್ ಆಫ್ ಎಜುಕೇಷನ್ ಸಂಸ್ಥೆ ಕಾರ್ಯದರ್ಶಿ ಡಾ.ರಾಮಲಿಂಗಯ್ಯ ಮಾಹಿತಿ

    ಮಂಡ್ಯ: ನಗರದ ಹೊರವಲಯದ ಯಲಿಯೂರು ವೃತ್ತದಲ್ಲಿರುವ ಅನಿಕೇತನ ಸ್ಕೂಲ್ ಆಫ್ ಎಜುಕೇಷನ್ ಸಂಸ್ಥೆಯು 10 ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಜ.19ರಿಂದ 28ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿಯೂ ಆದ ಪ್ರಾಂಶುಪಾಲ ಡಾ.ರಾಮಲಿಂಗಯ್ಯ ತಿಳಿಸಿದರು.
    ದಶಮಾನೋತ್ಸವ ಅಂಗವಾಗಿ 19ರಂದು ಜಿಲ್ಲಾಸ್ಪತ್ರೆ ಸಹಯೋಗದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ತಾಲೂಕಿನ ಶಾಲಾ-ಕಾಲೇಜಿನ ಸುಮಾರು 150 ಅಂಗವಿಕಲ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಬಿರ ಹಾಗೂ ಅಗತ್ಯ ಸಲಕರಣೆಗಳನ್ನು ವಿತರಿಸಲಾಗುತ್ತಿದೆ. ಮಾತ್ರವಲ್ಲದೆ ಸುಮಾರು 250 ಜನರಿಗೆ ಸಂಸ್ಥೆಯ ವತಿಯಿಂದ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
    20 ರಿಂದ 28ರವರೆಗೆ ಜಿಲ್ಲಾಸ್ಪತ್ರೆಯಲ್ಲಿ ಮಮತೆಯ ಮಡಿಲು ಯೋಜನೆಯಡಿ ಗರ್ಭಿಣಿಯರು ಮತ್ತು ಅವರ ಸಂಬಂಧಿಕರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಆಮಿಷಗಳಿಲ್ಲದೆ ಜಿಲ್ಲೆಯ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಸದುದ್ದೇಶ ಹೊಂದಿದ್ದೇವೆ. 2013ರಲ್ಲಿ 170 ವಿದ್ಯಾರ್ಥಿಗಳಿಂದ ಪ್ರಾರಂಭವಾದ ನಮ್ಮ ಸಂಸ್ಥೆಯು ಕೋವಿಡ್ ಸಾಂಕ್ರಾಮಿಕ ಪಿಡುಗಿನ ಸಂಕಷ್ಟವನ್ನು ಎದುರಿಸಿ ಇಂದು ಸಾವಿರ ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಮಾಡುವಂತಾಗಿದೆ. ಶಿಕ್ಷಣದ ಜತೆಗೆ ಸಮಾಜಮುಖಿ ಕಾರ್ಯಗಳಲ್ಲಿ ಸಂಸ್ಥೆಯು ತೊಡಗಿದ್ದು, ಕರೊನಾ ಸಂಕಷ್ಟದ ಸಂದರ್ಭದಲ್ಲಿ 1 ಲಕ್ಷ ದೇಣಿಗೆ ನೀಡಿದೆ. ಮುಂದೆಯೂ ಸಹ ಅವಿರತವಾಗಿ ಪ್ರತಿ ವರ್ಷ ಹೊಸ ಹೊಸ ಸಮಾಜಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲು ಇಚ್ಚಿಸಲಾಗಿದೆ. ದಶಮಾನೋತ್ಸವ ಪ್ರಯುಕ್ತ ಚರ್ಮರೋಗ ತಜ್ಞ ಡಾ. ಶಂಕರೇಗೌಡ, ಶಿಕ್ಷಣ ಕ್ಷೇತ್ರದಿಂದ ಕನ್ನಿಕಾ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಮಂಗಲ ಎಂ.ಯೋಗೇಶ್ ಅವರನ್ನು ಅಭಿನಂದಿಸಲಾಗುತ್ತಿದೆ ಎಂದು ಹೇಳಿದರು.
    ಸಂಸ್ಥೆಯ ಕಾರ್ಯದರ್ಶಿ ಎಚ್.ಎಸ್. ಚುಂಚೇಗೌಡ, ಉಪ ಪ್ರಾಂಶುಪಾಲೆ ಎಂ.ಕೆ. ಮಂಗಳಮ್ಮ, ಮುಖ್ಯ ಶಿಕ್ಷಕಿ ಎನ್.ತೇಜೇಶ್ವರಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts