More

    ದಸಂಸ ಮುಖಂಡರ ಪ್ರತಿಭಟನೆ

    ಪಾಂಡವಪುರ: ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಕಚೇರಿಯ ಮೂಲೆಯಲ್ಲಿ ಬಿಸಾಡಲಾಗಿದೆ ಎಂದು ಆರೋಪಿಸಿ ದಸಂಸ ಸಂಘಟನೆ ಮುಖಂಡರು ಸೋಮವಾರ ಪಟ್ಟಣದ ಪುರಸಭೆ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

    ವಕೀಲ ಕಣಿವೆ ಯೋಗೇಶ್ ಮಾತನಾಡಿ, ಗಾಂಧೀಜಿ ಹಾಗೂ ಅಂಬೇಡ್ಕರ್ ಪ್ರತಿಮೆಗಳನ್ನು ಮೂಲೆಗೆ ಎಸೆದಿರುವ ಬಗ್ಗೆ ಪುರಸಭೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ನಮಗೆ ಗೊತ್ತಿಲ್ಲ ಎಂದು ಸಬೂಬು ನೀಡುತ್ತಿದ್ದಾರೆ. ಪ್ರತಿಮೆಗಳು ಮೂಲೆ ಸೇರಲು ಯಾವ ಅಧಿಕಾರಿ ಕಾರಣ ಎಂಬುದನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

    ಸ್ಥಳಕ್ಕಾಗಮಿಸಿದ ತಹಸೀಲ್ದಾರ್ ಜಿ.ಎಸ್.ಶ್ರೇಯಸ್ ಮಾತನಾಡಿ, ಘಟನೆ ಬಗ್ಗೆ ತನಿಖೆ ನಡೆಸಲಾಗುವುದು. ರೀತಿ ಬೇಜವಾಬ್ದಾರಿ ತೋರಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಡಲಾಯಿತು. ಆನಂತರ ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಪ್ರತಿಮೆಗಳಿಗೆ ಪುರಸಭೆ ಅಧಿಕಾರಿಗಳು ಹೂವಿನ ಹಾರ ಹಾಕಿ ಗೌರವ ಸಮರ್ಪಿಸಿ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದರು.

    ಪ್ರತಿಭಟನೆಯಲ್ಲಿ ಪುರಸಭೆ ಸದಸ್ಯ ಶಿವಕುಮಾರ್, ಡಿಎಸ್‌ಎಸ್ ಮುಖಂಡರಾದ ಚಂದ್ರು, ಹಾರೋಹಳ್ಳಿ ಸೋಮಶೇಖರ್, ಮಲ್ಲಿಗೆರೆ ನಂದೀಶ್, ಚಿಕ್ಕಾಡೆ ಮದನ್‌ಕುಮಾರ್, ಸುಂಕಾತೊಣ್ಣೂರು ಶ್ರೀಧರ, ರವಿ, ರಾಚಯ್ಯ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts