ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ನಾಡಹಬ್ಬ

Ksd_Nadahabba
Published on

ವಿಜಯವಾಣಿ ಸುದ್ದಿಜಾಲ ಕಾಸರಗೋಡು

ಕನ್ನಡ ಬಳಗ ವಿದ್ಯಾನಗರ ಕಾಸರಗೋಡು, ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನ ವಿಭಾಗ ಸರ್ಕಾರಿ ಕಾಲೇಜು ಕಾಸರಗೋಡು ಇವುಗಳ ಆಶ್ರಯದಲ್ಲಿ ದಸರಾ ನಾಡಹಬ್ಬ ವಿವಿಧ ಸಾಂಸ್ಕೃತಿಕ ಕಾರ‌್ಯಕ್ರಮಗಳೊಂದಿಗೆ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸಾಹಿತ್ಯಿಕ, ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು. ಮಧ್ಯಾಹ್ನ ನಡೆದ ಸಭಾ ಕಾರ್ಯಕ್ರಮವನ್ನು ಕಾಲೇಜು ಪ್ರಾಂಶುಪಾಲ ಡಾ.ವಿ.ಎಸ್.ಅನಿಲ್ ಕುಮಾರ್ ಉದ್ಘಾಟಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಸುಜಾತ ಎಸ್.ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಂಗೀತ ಕಲಾವಿದ ಕಲ್ಮಾಡಿ ಸದಾಶಿವ ಆಚಾರ್ಯ ಸಾಂಸ್ಕೃತಿಕ ಉಪನ್ಯಾಸ ನೀಡಿದರು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ವಿದ್ಯಾರ್ಥಿಗಳಿಂದ ಭಕ್ತಿಗೀತೆ, ಭಾವಗೀತೆ, ಚಿತ್ರಗೀತೆ, ಸಮೂಹಗೀತೆಗಳ ಗಾಯನ, ಭರತನಾಟ್ಯ, ಸಮೂಹ ನೃತ್ಯ ಮತ್ತು ಊರ್ಮಿಳೆ ನಾಟಕ ಪ್ರದರ್ಶನಗೊಂಡಿತು. ಕಾಸರಗೋಡು ಕನ್ನಡ ಬಳಗದ ಕಾರ್ಯದರ್ಶಿ ಡಾ.ಬಾಲಕೃಷ್ಣ ಹೊಸಂಗಡಿ ಸ್ವಾಗತಿಸಿದರು. ಜತೆಕಾರ್ಯದರ್ಶಿ ಡಾ.ಆಶಾಲತಾ ಸಿ.ಕೆ.ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net