ದಸರಾ ಉದ್ಘಾಟಿಸಲು ಸುಧಾಮೂರ್ತಿಗೆ ಸರ್ಕಾರದಿಂದ ಅಧಿಕೃತ ಆಹ್ವಾನ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಉದ್ಘಾಟನೆಗಾಗಿ ಇನ್ಫೋಸಿಸ್​ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಸರ್ಕಾರದಿಂದ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ.

ಬುಧವಾರ ಮೈಸೂರು ಉಸ್ತುವಾರಿ ಸಚಿವ‌ ಜಿ.ಟಿ‌. ದೇವೇಗೌಡ ಹಾಗೂ ಮೈಸೂರಿನ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್‌ ಅವರು ಜಯನಗರದ ಇನ್ಫೋಸಿಸ್‌ ಫೌಂಡೇಶನ್‌ ಕಚೇರಿಗೆ ಆಗಮಿಸಿ ಆಮಂತ್ರಣ ನೀಡಿದ್ದಾರೆ. ಈ ವೇಳೆ ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್​ ಹಾಗೂ ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ವಿಶ್ವನಾಥ್​ ಸಾಥ್​ ನೀಡಿದರು.

ಸರಳ ಸಜ್ಜನಿಕೆಗೆ ಹೆಸರಾದ, ಸಾಮಾಜಿಕ ಕಾರ್ಯಗಳಗಳಲ್ಲಿ ತೊಡಗಿಸಿಕೊಂಡಿರುವ ಹಾಗೂ ಲೇಖಕರಾಗಿಯೂ ಗಮನ ಸೆಳೆದಿರುವ ಸುಧಾಮೂರ್ತಿ ಅವರಿಂದ ಈ ಬಾರಿಯ ದಸರಾವನ್ನು ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದರು. (ದಿಗ್ವಿಜಯ ನ್ಯೂಸ್​)

ಈ ಬಾರಿಯ ಸಾಂಪ್ರದಾಯಿಕ ದಸರಾ ಉದ್ಘಾಟಿಸಲಿದ್ದಾರೆ ಸುಧಾಮೂರ್ತಿ