

ಮೂಡುಬಿದಿರೆ: ಸಿಂಥೆಟಿಕ್ ಟ್ರಾಕ್ ಒಳಗೊಂಡ ಸುಸಜ್ಜಿತ ಕ್ರೀಡಾಂಗಣ ಇರುವುದು ಮೂಡುಬಿದಿರೆಯಲ್ಲಿ ಮಾತ್ರ. ಕ್ರೀಡಾಂಗಣದ ವೀಕ್ಷಕರ ಗ್ಯಾಲರಿ ಮೇಲ್ಛಾವಣಿ ಶೀಟ್‌ಗಳು ಗಾಳಿಮಳೆಗೆ ಹಾರಿ ಹೋಗಿವೆ. ಅದನ್ನು ಸರಿಪಡಿಸಿ ಇಡೀ ಕ್ರೀಡಾಂಗಣ ವಿಶೇಷ ಅನುದಾನದಲ್ಲಿ ಸುಸಜ್ಜಿತಗೊಳಿಸಲು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು.
ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ದ.ಕ. ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೂಡುಬಿದಿರೆ ತಾಪಂ, ಪುರಸಭೆ, ಯುವಜನ ಒಕ್ಕೂಟ ಹಾಗೂ ವಿವಿಧ ಸಂಘ ಸಂಸ್ಥೆಗಳು ಆಶ್ರಯದಲ್ಲಿ ಭಾನುವಾರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಧ್ವಜಾರೋಹಣಗೊಳಿಸಿ ಮಾತನಾಡಿದರು.
ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್ ಕ್ರೀಡಾಕೂಟ ಉದ್ಘಾಟಿಸಿದರು. ತಾಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಪುರಸಭಾ ಸದಸ್ಯ ಸುರೇಶ್ ಕೋಟ್ಯಾನ್, ಜಿಲ್ಲಾ ಯುವಜನ ಕ್ರೀಡಾ ಇಲಾಖೆ ಸರಸ್ವತಿ ಪುತ್ರನ್, ನಿವೃತ್ತ ಶಿಕ್ಷಕ ನಾಗೇಶ್ ಉಪಸ್ಥಿತರಿದ್ದರು. ಕ್ರೀಡಾಕೂಟದ ನೋಡೆಲ್ ಅಧಿಕಾರಿ ನವೀನ್ ಚಂದ್ರ ಅಂಬೂರಿ ನಿರೂಪಿಸಿದರು.