Tuesday, 20th November 2018  

Vijayavani

ಕಬ್ಬು ಬೆಳಗಾರರ ಜತೆ ಸಿಎಂ ಸಭೆ - ವಿಧಾನಸೌಧಕ್ಕೆ ಆಗಮಿಸಿದ ರೈತ ಮುಖಂಡರು - ಕಬ್ಬಿನ ಬಾಕಿ ಹಣ ಕೊಡಿಸ್ತಾರಾ ಎಚ್‌ಡಿಕೆ?        ಉ-ಕ ರೈತರ ಹೋರಾಟಕ್ಕೆ ಜಾತಿ ಲೇಪನ - ನಾಲಾಯಕ್ ಅನ್ನೋದು ಕೆಟ್ಟ ಪದ ಅಲ್ಲ - ಸಿಎಂ ವಿರುದ್ಧ ಮತ್ತೆ ಗುಡುಗಿದ ಯಡಿಯೂರಪ್ಪ        ಸಿಂಪಲ್ ಮ್ಯಾರೇಜ್ ಆಗೋರಿಗೆ ಶಾಕ್‌- ಮುಜರಾಯಿ ದೇವಸ್ಥಾನದಲ್ಲಿ ಮದುವೆಗೆ ಬ್ರೇಕ್‌ - ಅರ್ಚಕರ ಮನವಿಗೆ ಇಲಾಖೆ ನಿರ್ಧಾರ        ದಿಗ್ಗಜರಿಂದಲೇ ಬಿಬಿಎಂಪಿಗೆ ಬಾಕಿ - ಜಾರ್ಜ್‌, ಹ್ಯಾರೀಸ್‌, ಕುಪೇಂದ್ರರೆಡ್ಡಿ ಕಟ್ಟಿಲ್ಲ ಟ್ಯಾಕ್ಸ್‌ - ಪಾಲಿಕೆ ದಿವಾಳಿಗೆ ಕಾರಣರಾದ್ರಾ ನಾಯಕರು        ಛತ್ತಿಸ್‌ಗಡದಲ್ಲಿ ಎರಡನೇ ಹಂತದ ಮತದಾನ -72 ವಿಧಾನಸಭಾ ಕ್ಷೇತ್ರಗಳಲ್ಲಿ ವೋಟಿಂಗ್‌ - ಮಧ್ಯ ಪ್ರದೇಶದಲ್ಲಿ ಪ್ರಧಾನಿ ರ‍್ಯಾಲಿ        ಬೆಂಗಳೂರಿಗೆ ಬಂದಿಳಿದ ನವಜೋಡಿ - ಮುಂಬೈನಿಂದ ಸಿಲಿಕಾನ್‌ ಸಿಟಿಗೆ ರಣವೀರ್‌, ದೀಪಿಕಾ - ನಾಳೆ ಲೀಲಾ ಪ್ಯಾಲೇಸ್‌ನಲ್ಲಿ ರಿಸೆಪ್ಷನ್       
Breaking News

ವಿಜಯದಶಮಿಯಂದೇ ರಾಜಮಾತೆ ಪ್ರಮೋದಾ ದೇವಿಗೆ ಮಾತೃ ವಿಯೋಗ

Friday, 19.10.2018, 7:35 AM       No Comments

ಮೈಸೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮೈಸೂರು ಅರಮನೆಯ ರಾಜಮಾತೆ ಪ್ರಮೋದಾ ದೇವಿ ಅವರ ತಾಯಿ ಪುಟ್ಟರತ್ನಮ್ಮಣಿ(98) ಅವರು ವಿಜಯದಶಮಿ ದಿನವಾದ ಶುಕ್ರವಾರದಂದೇ ಇಹಲೋಕ ತ್ಯಜಿಸಿದ್ದಾರೆ.

ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟರತ್ನಮ್ಮಣಿ ಅವರ ಸಾವಿನಿಂದ ಅರಮನೆಯಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಅಜ್ಜಿಯ ಸಾವಿನ ನೋವಿನಲ್ಲಿರುವ ಮಹಾರಾಜ ಯದುವೀರ ಸರಳವಾಗಿ ಪೂಜೆ ಸಲ್ಲಿಸಲಿದ್ದು, ಬೆಳ್ಳಿ ಪಲ್ಲಕ್ಕಿ ಏರಿ ವಿಜಯಯಾತ್ರೆ ಮಾಡುವುದು ಅನುಮಾನವಾಗಿದೆ.

ಧಾರ್ಮಿಕ ಪೂಜಾ ವಿಧಾನಗಳ ಬಗ್ಗೆ ರಾಜಮಾತೆ ಪ್ರಮೋದಾದೇವಿ ಅರಮನೆಯ ಪುರೋಹಿತರೊಂದಿಗೆ ಚರ್ಚಿಸಿದ್ದಾರೆ. ಅಲ್ಲದೆ, ಅವರು ವಿಜಯದಶಮಿ ಪೂಜೆಯಲ್ಲಿ ಭಾಗವಹಿಸುವುದು ಅನುಮಾನವಾಗಿದ್ದು, ಸಮರ್​​ ಪ್ಯಾಲೇಸ್​​ನಲ್ಲಿ ಅಂತ್ಯಕ್ರಿಯೆ ಕುರಿತು ರಾಜಮಾತೆ ಚರ್ಚಿಸಿದ್ದಾರೆ.

ಸೂತಕವಿಲ್ಲ
ಕೊಟ್ಟ ಹೆಣ್ಣು ಕುಲದಿಂದ ಹೊರಗೆ ಎನ್ನುವ ಮಾತಿನಂತೆ ಮದುವೆಯಾದ ಕೂಡಲೇ ಗೋತ್ರ ಬದಲಾಗುತ್ತೆ. ಪ್ರಮೋದಾದೇವಿ ಒಡೆಯರ್ ಗೋತ್ರವೀಗ ರಾಜಮನೆತನದ್ದಾಗಿದ್ದು, ತವರು ಮನೆಯ ಸೂತಕಕ್ಕೂ ಅರಮನೆ ಆಚರಣೆಗಳಿಗೂ ಸಂಬಂಧವಿಲ್ಲ ಎನ್ನಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top