More

    ಪದವಿ ಕಾಲೇಜು ತರಗತಿಗಳ ಆರಂಭಕ್ಕೆ ಡೇಟ್​ಫಿಕ್ಸ್, ಇಲ್ಲಿದೆ ಡಿಟೇಲ್ಸ್

    ಬೆಂಗಳೂರು: ಕರೊನಾ ಸೋಂಕಿನ ಭೀತಿ ಇಲ್ಲದಿದ್ದರೆ ಇಷ್ಟೊತ್ತಿಗೆ ಶಾಲಾ-ಕಾಲೇಜುಗಳು ಆರಂಭವಾಗಬೇಕಿತ್ತು. ಶಾಲಾ ಮಕ್ಕಳಿಗೆ ಆನ್​ಲೈನ್​ ಶಿಕ್ಷಣ, ಮನೆಪಾಠ ಸದ್ಯ ಚಾಲ್ತಿಯಲ್ಲಿದೆಯಾದರೂ ಪದವಿ ಕಾಲೇಜುಗಳ ತರಗತಿ ಶುರು ಆಗಿರಲಿಲ್ಲ. ಇದಕ್ಕೂ ಮುಹೂರ್ತ ಫಿಕ್ಸ್ ಆಗಿದ್ದು, ಇನ್ನು ನಾಲ್ಕೇ ದಿನದಲ್ಲಿ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷ ಆರಂಭವಾಗಲಿದೆ.

    ಈ ಬಗ್ಗೆ ಸ್ವತಃ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರೇ ಪ್ರಕಟಿಸಿದ್ದಾರೆ. ಬುಧವಾರ ಬೆಳಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೆಪ್ಟೆಂಬರ್ 1ರಿಂದಲೇ ಆನ್​ಲೈನ್ ಮೂಲಕ ಪೂರ್ಣ ಪ್ರಮಾಣದಲ್ಲಿ ತರಗತಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್​ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ತಿಳಿಸಿದ್ದಾರೆ.

    ಇದನ್ನೂ ಓದಿರಿ ಸರ್ಕಾರಿ / ಖಾಸಗಿ ಅನುದಾನಿತ ಐಟಿಐಗಳಿಗೆ ಪ್ರವೇಶಾವಕಾಶ

    ಕೇಂದ್ರ ಸರ್ಕಾರದಿಂದ ನೇರ ತರಗತಿಗಳ ಆರಂಭಕ್ಕೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್​ನಲ್ಲಿ ಕೆಲ ಪದವಿ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ಸರ್ಕಾರವೂ ಮುಂದಿನ ತಿಂಗಳಿಂದ ಆನ್​ಲೈನ್ ಮೂಲಕವೇ ಎಲ್ಲ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರ್ಣ ಪ್ರಮಾಣದಲ್ಲಿ ಚಾಲನೆ ನೀಡಲು ನಿರ್ಧರಿಸಿದೆ. ಜತೆಗೆ, ಅಕ್ಟೋಬರ್​ನಿಂದಲೇ ಎಲ್ಲ ಕಾಲೇಜು ಆರಂಭಿಸಲಾಗುವುದು. ವಿದ್ಯಾರ್ಥಿಗಳು ಕೂಡ ತರಗತಿಗಳಿಗೆ ಹಾಜರಾಗಬೇಕಾಗುತ್ತದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ ತಿಳಿಸಿದರು.

    ತರಗತಿ ಆರಂಭಿಸಲು ಈಗಾಗಲೇ ಯುಜಿಸಿ ಮಾರ್ಗಸೂಚಿಯಂತೆ ರಾಜ್ಯ ಸರ್ಕಾರ ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆಯನ್ನು ಮಾಡಿಕೊಂಡಿದೆ. ಕೇಂದ್ರ ಸರ್ಕಾರದ ಆದೇಶ ಬರುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ರಾಜ್ಯವು ಕಾರ್ಯೋನ್ಮುಖವಾಗಲಿದೆ ಎಂದು ವಿವರಿಸಲಿದೆ.

    ಶೈಕ್ಷಣಿಕ ವರ್ಷದ ಆರಂಭದ ಜತೆಗೆ ಅಂತಿಮ ವರ್ಷದ ಎಲ್ಲ ಪದವಿ, ಡಿಪ್ಲೊಮಾ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಬ್ಯಾಕ್​ಲಾಗ್ ಉಳಿಸಿಕೊಂಡಿರುವ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಯಲಿದೆ ಎಂದು ಡಿಸಿಎಂ ಹೇಳಿದರು.

    ನೀಟ್ ಪರೀಕ್ಷೆ ವಿರೋಧ ಮಾಡುತ್ತಿರುವವರಿಗೆ ಖಂಡಿತವಾಗಿಯೂ ದುರುದ್ದೇಶವಿದೆ. ಆದರೆ, ರಾಜ್ಯ ಸರ್ಕಾರ ಈ ಪರೀಕ್ಷೆಗೆ ಬೇಕಾದ ಎಲ್ಲ ಸಹಕಾರ ನೀಡಲಿದೆ ಎಂದು ಸ್ಪಷ್ಟಪಡಿಸಿದರು.

    video/ ಗಣೇಶ ವಿಸರ್ಜನೆ ಬಳಿಕ ನಡೆಯಿತು ಪವಾಡ!

    ಕೋಲುಮಂಡೆ ವಿವಾದ: ರ‍್ಯಾಪರ್​ ಚಂದನ್ ಶೆಟ್ಟಿ ವಿರುದ್ಧ ದೂರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts