More

    ಹ್ಯಾಟ್ರಿಕ್​ ಗೆಲುವು ಸಾಧಿಸಲು ಮೋದಿ ದಕ್ಷಿಣ ದಂದಯಾತ್ರೆ! ಕರ್ನಾಟಕ ಈ ಕ್ಷೇತ್ರಗಳೇ ಟಾರ್ಗೆಟ್​

    ಬೆಂಗಳೂರು: ಲೋಕಸಭೆ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಯಾವುದೇ ಕ್ಷಣದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಬಹುದು. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ ಎರಡನೇ ಹಂತದ ಬಿರುಸಿನ ಪ್ರಚಾರಕ್ಕೆ ಸಿದ್ಧತೆ ನಡೆಸಿದ್ದಾರೆ. ಈ ಬಾರಿ ಕರ್ನಾಟಕ ಸೇರಿದಂತೆ ದಕ್ಷಿಣದ ಪಂಚ ರಾಜ್ಯಗಳಲ್ಲಿ ಪ್ರಧಾನಿ ಪ್ರವಾಸ ಕೈಗೊಳ್ಳಲಿದ್ದಾರೆ.

    ಇದನ್ನೂ ಓದಿ: ಹಾರ್ದಿಕ್​​​ ಪಾಂಡ್ಯಗೆ ಹಿಗ್ಗಾಮುಗ್ಗಾ ಜಾಡಿಸಿದ ಸ್ಟಾರ್​​ ಕ್ರಿಕೆಟರ್​: ಕಾರಣ ಹೀಗಿದೆ?

    ರಾಜ್ಯದಲ್ಲಿ ಮೋದಿ ಅವರ ಲೋಕಸಭಾ ಚುನಾವಣೆಯ ಪ್ರಚಾರ ಸಮಾವೇಶಗಳು ಮಾರ್ಚ್‌ 16ರಿಂದ ಆರಂಭವಾಗಲಿವೆ. ಅವರು ಮಾರ್ಚ್‌ 16ರಂದು ಕಲಬುರಗಿಯಲ್ಲಿ ಮತ್ತು ಮಾರ್ಚ್‌ 18ರಂದು ಶಿವಮೊಗ್ಗದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

    ಹ್ಯಾಟ್ರಿಕ್​ ಗೆಲುವು ಸಾಧಿಸಲು ಮೋದಿ ದಕ್ಷಿಣ ದಂದಯಾತ್ರೆ! ಕರ್ನಾಟಕ ಈ ಕ್ಷೇತ್ರಗಳೇ ಟಾರ್ಗೆಟ್​

    ಪ್ರಧಾನಿ ಮೋದಿ ಅವರು ಮಾ.16ರಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿಗೆ ಭೇಟಿ ಕೊಡಲಿದ್ದಾರೆ. ಅಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾರೆ ಎಂದು ಮಾಜಿ ಸಚಿವ ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

    ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮೋದಿ ಅವರ ಎರಡು ದಿನಗಳ ಪ್ರವಾಸಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 16ರಂದು ಕಲಬುರ್ಗಿ ಎನ್‍ವಿ ಆಟದ ಮೈದಾನದಲ್ಲಿ ಸಭೆ ನಡೆಯಲಿದೆ. 18ರಂದು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

    ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ಪಕ್ಷದ ಪ್ರಮುಖರು ಬೇರೆ ಬೇರೆ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ಕೊಡಲಿದ್ದಾರೆ ಎಂದು ಹೇಳಿದರು.

    ಹಾರ್ದಿಕ್​​​ ಪಾಂಡ್ಯಗೆ ಹಿಗ್ಗಾಮುಗ್ಗಾ ಜಾಡಿಸಿದ ಸ್ಟಾರ್​​ ಕ್ರಿಕೆಟರ್​: ಕಾರಣ ಹೀಗಿದೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts