ಅನ್ಯಕೋಮಿನ ಯುವಕನ ಜತೆ ಪ್ರೀತಿ; ಮಗಳನ್ನೇ ಸಿನಿಮೀಯ ರೀತಿಯಲ್ಲಿ ಕೊಲೆ ಮಾಡಿದ ತಂದೆ!

ಬಳ್ಳಾರಿ: ಅನ್ಯಕೋಮಿನ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುಡಿತಿನಿ ಪಟ್ಟಣದಲ್ಲಿ ನಡೆದಿದೆ. ಕುಡುತಿನಿ ಪಟ್ಟಣದ ಬುಡ್ಗ ಜಂಗಮ ಕಾಲನಿ ನಿವಾಸಿ ಓಂಕಾರಗೌಡನೇ ತನ್ನ ಮಗಳನ್ನು ಕೊಲೆ ಮಾಡಿದ ತಂದೆ. ಓಂಕಾರಗೌಡನ ಮಗಳು ಹೈಸ್ಕೂಲ್‌ನಲ್ಲಿ ಓದುತ್ತಿದ್ದಳು. ಅನ್ಯ ಕೋಮಿನ ಯುವಕನೊಂದಿಗೆ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಳು‌. ಈ ಬಗ್ಗೆ ಮನೆಯವರಿಗೆ ಗೊತ್ತಾಗಿತ್ತು. ಆ ಯುವಕನಿಂದ ದೂರವಿರುವಂತೆ ಎಚ್ಚರಿಕೆ ನೀಡಿದ್ದರು. ಆದರೂ ಆಕೆ ಆ ಯುವಕನೊಡನೆ ಪ್ರೀತಿ- ಒಡನಾಟ ಮುಂದುವರಿಸಿದ್ದಳು. ಇದರಿಂದ ಸಿಟ್ಟಾಗಿದ್ದ ಓಂಕಾರ್ … Continue reading ಅನ್ಯಕೋಮಿನ ಯುವಕನ ಜತೆ ಪ್ರೀತಿ; ಮಗಳನ್ನೇ ಸಿನಿಮೀಯ ರೀತಿಯಲ್ಲಿ ಕೊಲೆ ಮಾಡಿದ ತಂದೆ!